Lamentations · chapter 5 · verse 2
Lamentations 5:2 in Kannada
ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
Namma svaastyavu aparichitarigoo namma manegalu anyarigoo vasha vaadavu.
Lamentations 5:2 in English
- King James Version (KJV)
- Our inheritance is turned to strangers, our houses to aliens.
- World English Bible (WEB)
- Our inheritance has been turned over to strangers, our houses to aliens.
- American Standard Version (ASV)
- Our inheritance is turned unto strangers, Our houses unto aliens.
- Bible in Basic English (BBE)
- Our heritage is given up to men of strange lands, our houses to those who are not our countrymen.
- Darby Translation (DBY)
- Our inheritance is turned to strangers, our houses to aliens.
- Webster's Bible (WBS)
- Our inheritance is turned to strangers, our houses to aliens.
- Young's Literal Translation (YLT)
- Our inheritance hath been turned to strangers, Our houses to foreigners.
Read in context
- 1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- 2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- 3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
- 4ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
Cross references
- Zephaniah 1:13 ಚೆಫನ್ಯ 1:13ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Psalm 79:1–2 ಕೀರ್ತನೆಗಳು 79:1–2ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ. ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಪರಿಶುದ್ಧರ ಮಾಂಸ ವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿ ದ್ದಾರೆ.
- Deuteronomy 28:30–68 ಧರ್ಮೋಪದೇಶಕಾಂಡ 28:30–68ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Isaiah 63:18 ಯೆಶಾಯ 63:18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- Jeremiah 6:12 ಯೆರೆಮೀಯ 6:12ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
- Ezekiel 7:24 ಯೆಹೆಜ್ಕೇಲನು 7:24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
- Ezekiel 7:21 ಯೆಹೆಜ್ಕೇಲನು 7:21ನಾನು ಅದನ್ನು ಅಪರಿಚಿತರ ಕೈಗೆ ಕೊಳ್ಳೆಯಾಗಿಯೂ ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು ಮತ್ತು ಅವರು ಅದನ್ನು ಅಪವಿತ್ರಪಡಿಸುವರು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.