Lamentations · chapter 5 · verse 4
Lamentations 5:4 in Kannada
ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
Naavu namma neerannu hana kottu kudididdeve, namma saudeyu namage maaralpattide.
Lamentations 5:4 in English
- King James Version (KJV)
- We have drunken our water for money; our wood is sold unto us.
- World English Bible (WEB)
- We must pay for water to drink. Our wood is sold to us.
- American Standard Version (ASV)
- We have drunken our water for money; Our wood is sold unto us.
- Bible in Basic English (BBE)
- We give money for a drink of water, we get our wood for a price.
- Darby Translation (DBY)
- Our water have we to drink for money, our wood cometh unto us for a price.
- Webster's Bible (WBS)
- We have drank our water for money; our wood is sold to us.
- Young's Literal Translation (YLT)
- Our water for money we have drunk, Our wood for a price doth come.
Read in context
- 2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
- 3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
- 4ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
- 5ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
- 6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
Cross references
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- Ezekiel 4:9–17 ಯೆಹೆಜ್ಕೇಲನು 4:9–17ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು. ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು. ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು. ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು; ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ. ಆಮೇಲೆ ನಾನು--ಹಾ! ದೇವ ರಾದ ಕರ್ತನೇ, ಇಗೋ, ನನ್ನ ಪ್ರಾಣವು ಅಶುದ್ಧವಾಗ ಲಿಲ್ಲ, ಯಾಕಂದರೆ ನಾನು ಚಿಕ್ಕಂದಿನಿಂದ ಇಷ್ಟರವರೆಗೂ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನು ಅಥವಾ ಹರಿದು ಚೂರು ಚೂರಾಗಿರುವದನ್ನು ತಿನ್ನಲಿಲ್ಲ; ಇಲ್ಲವೆ ಅಸಹ್ಯ ವಾದ ಮಾಂಸವನ್ನಾದರೂ ನನ್ನ ಬಾಯಿಯ ಹತ್ತಿರ ತಂದಿಲ್ಲ ಎಂದೆನು. ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು. ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು. ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Deuteronomy 28:48 ಧರ್ಮೋಪದೇಶಕಾಂಡ 28:48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.