Lamentations · chapter 5 · verse 6
Lamentations 5:6 in Kannada
ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
Rottiyinda truptipaduvadakkaagi namma kaiyannu aiguptyarigoo ashshooryarigoo kottiddeve.
Lamentations 5:6 in English
- King James Version (KJV)
- We have given the hand [to] the Egyptians, [and to] the Assyrians, to be satisfied with bread.
- World English Bible (WEB)
- We have given our hands to the Egyptians, and to the Assyrians, to be satisfied with bread.
- American Standard Version (ASV)
- We have given the hand to the Egyptians, And to the Assyrians, to be satisfied with bread.
- Bible in Basic English (BBE)
- We have given our hands to the Egyptians and to the Assyrians so that we might have enough bread.
- Darby Translation (DBY)
- We have given the hand to Egypt, [and] to Asshur, to be satisfied with bread.
- Webster's Bible (WBS)
- We have given the hand [to] the Egyptians, [and to] the Assyrians, to be satisfied with bread.
- Young's Literal Translation (YLT)
- [To] Egypt we have given a hand, [To] Asshur, to be satisfied with bread.
Read in context
- 4ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
- 5ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
- 6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
- 7ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
- 8ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
Cross references
- Hosea 12:1 ಹೋಶೇಯ 12:1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Hosea 7:11 ಹೋಶೇಯ 7:11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Jeremiah 2:18 ಯೆರೆಮೀಯ 2:18ಈಗ ಸಿಹೋರಿನ ನೀರು ಕುಡಿಯುವದಕ್ಕಾಗಿ ಐಗುಪ್ತದ ದಾರಿಯಲ್ಲಿ ನಿನಗೇನು ಕೆಲಸ? ಇಲ್ಲವೆ ನದಿಯ ನೀರು ಕುಡಿ ಯುವದಕ್ಕಾಗಿ ಅಶ್ಶೂರಿನ ದಾರಿಯಲ್ಲಿ ನಿನಗೇನು ಕೆಲಸ?
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Genesis 24:2 ಆದಿಕಾಂಡ 24:2ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
- Isaiah 57:9 ಯೆಶಾಯ 57:9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Isaiah 30:1–6 ಯೆಶಾಯ 30:1–6ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ. ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ. ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Ezekiel 17:18 ಯೆಹೆಜ್ಕೇಲನು 17:18ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ.
- 2 Kings 10:15 2 ಅರಸುಗಳು 10:15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--