Leviticus · chapter 11 · verse 2
Leviticus 11:2 in Kannada
ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:
Israayelana makkalondige maatanaadi heege helabeku--bhoomiya mele iruva ellaa pashugalalli neevu tinnabekaadavugalu ive:
Leviticus 11:2 in English
- King James Version (KJV)
- Speak unto the children of Israel, saying, These [are] the beasts which ye shall eat among all the beasts that [are] on the earth.
- World English Bible (WEB)
- “Speak to the children of Israel, saying, ‘These are the living things which you may eat among all the animals that are on the earth.
- American Standard Version (ASV)
- Speak unto the children of Israel, saying, These are the living things which ye may eat among all the beasts that are on the earth.
- Bible in Basic English (BBE)
- Say to the children of Israel: These are the living things which you may have for food among all the beasts on the earth.
- Darby Translation (DBY)
- Speak unto the children of Israel, saying, These are the animals which ye shall eat of all the beasts which are on the earth.
- Webster's Bible (WBS)
- Speak to the children of Israel, saying, These [are] the beasts which ye may eat among all the beasts that [are] on the earth.
- Young's Literal Translation (YLT)
- 'Speak unto the sons of Israel, saying, This [is] the beast which ye do eat out of all the beasts which [are] on the earth:
Read in context
- 1ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ
- 2ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:
- 3ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
- 4ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
Cross references
- Matthew 15:11 ಮತ್ತಾಯನು 15:11ಬಾಯೊಳಗೆ ಹೋಗುವಂಥದು ಮನುಷ್ಯನನ್ನು ಹೊಲೆಮಾಡುವದಿಲ್ಲ; ಆದರೆ ಬಾಯೊ ಳಗಿಂದ ಹೊರಗೆ ಬರುವಂಥದೇ ಮನುಷ್ಯನನ್ನು ಹೊಲೆಮಾಡುತ್ತದೆ ಎಂದು ಹೇಳಿದನು.
- Hebrews 9:10 ಇಬ್ರಿಯರಿಗೆ 9:10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- Leviticus 11:11 ಯಾಜಕಕಾಂಡ 11:11ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು.
- Acts 10:12–14 ಅಪೊಸ್ತಲರ ಕೃತ್ಯಗಳು 10:12–14ಭೂಮಿಯ ಮೇಲಿ ರುವ ನಾಲ್ಕು ಕಾಲುಗಳುಳ್ಳ ಎಲ್ಲಾ ತರವಾದ ಪಶು ಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟ ಗಳೂ ಆಕಾಶದ ಪಕ್ಷಿಗಳೂ ಅದರೊಳಗೆ ಇದ್ದವು. ಆಗ--ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ಹೇಳುವ ಒಂದು ಧ್ವನಿಯು ಅವನಿಗೆ ಕೇಳಿಸಿತು. ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.
- Leviticus 11:39 ಯಾಜಕಕಾಂಡ 11:39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
- Leviticus 11:13 ಯಾಜಕಕಾಂಡ 11:13ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
- Deuteronomy 14:3–21 ಧರ್ಮೋಪದೇಶಕಾಂಡ 14:3–21ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ: ಎತ್ತು, ಕುರಿ, ಮೇಕೆ, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ ಕೊಂಡಗುರಿ. ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು. ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ನೀರಿನಲ್ಲಿರುವ ಎಲ್ಲವುಗಳಲ್ಲಿ ನೀವು ಇವುಗಳನ್ನು ತಿನ್ನಬಹುದು: ರೆಕ್ಕೆಗಳೂ ಪೊರೆಗಳೂ ಉಳ್ಳವುಗ ಳನ್ನೆಲ್ಲಾ ತಿನ್ನಬಹುದು. ಆದರೆ ರೆಕ್ಕೆಗಳೂ ಪೊರೆ ಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು; ಅವು ನಿಮಗೆ ಅಶುದ್ಧವಾಗಿವೆ. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವ ವೆಂದರೆ: ಗರುಡ, ಬೆಟ್ಟದಹದ್ದು, ಕ್ರೌಂಚ, ಗಿಡಗ, ಹಕ್ಕಿಸಾಲೆ, ಗಿಡಗವೂ ಬೈರಿಯೂ ಜಾತ್ಯಾನುಸಾರ ವಾದ ರಣಹದ್ದು ಜಾತ್ಯಾನುಸಾರವಾದ ಸಕಲ ಕಾಗೆಯೂ ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ ಚಿಕ್ಕ ಗೂಬೆಯೂ ದೊಡ್ಡಗೂಬೆಯೂ ಕೊಕ್ಕರೆಯೂ ನೀರು ಕೋಳಿಯೂ ಹೆಣಹದ್ದೂ ಬೆಳ್ವಕ್ಕಿಯೂ ನೀರು ಕೊಕ್ಕರೆಯೂ ಜಾತ್ಯಾನುಸಾರವಾದ ಬಕವೂ ಬುಡ್ಡಗೋಳಿಯೂ ರಾತ್ರಿಗೀಜಕವೂ. ಇದಲ್ಲದೆ ಹಾರುವ ಎಲ್ಲಾ ಹುಳಗಳು ನಿಮಗೆ ಅಶುದ್ಧವೇ, ಅವುಗಳನ್ನು ತಿನ್ನಬಾರದು. ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು. ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
- Leviticus 11:29 ಯಾಜಕಕಾಂಡ 11:29ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ,
- Leviticus 11:9 ಯಾಜಕಕಾಂಡ 11:9ನೀರೊಳಗಿರುವ ಇವುಗಳನ್ನು ನೀವು ತಿನ್ನಬಹುದು: ಸಮುದ್ರದಲ್ಲಿಯೂ ನದಿಯಲ್ಲಿರುವ ನೀರಿನಲ್ಲಿಯೂ ಈಜು ರೆಕ್ಕೆಗಳ್ಳಿದ್ದು ಪೊರೆಯಿರುವವುಗಳನ್ನು ತಿನ್ನಬೇಕು.
- Romans 14:2–3 ರೋಮಾಪುರದವರಿಗೆ 14:2–3ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ; ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- Leviticus 11:4 ಯಾಜಕಕಾಂಡ 11:4ಮೇವನ್ನು ಮೆಲುಕಾಡಿಸದ ಇಲ್ಲವೆ ಗೊರಸು ಸೀಳದಿರುವ ಯಾವದನ್ನೂ ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವದಾದರೂ ಗೊರಸು ಸೀಳಲ್ಪಟ್ಟಿಲ್ಲ, ಅದು ನಿಮಗೆ ಅಶುದ್ಧವಾಗಿದೆ.
- Leviticus 11:21 ಯಾಜಕಕಾಂಡ 11:21ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನ ಬಹುದು.