Leviticus · chapter 13 · verse 10
Leviticus 13:10 in Kannada
ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
Aaga yaajakanu avanannu nodabeku; igo, aa baavu charmadalli bellagiddu adara koodalu bellagaagi hogiddare mattu aa baavinalli hasimaansavu iddare
Leviticus 13:10 in English
- King James Version (KJV)
- And the priest shall see [him:] and, behold, [if] the rising [be] white in the skin, and it have turned the hair white, and [there be] quick raw flesh in the rising;
- World English Bible (WEB)
- and the priest shall examine him. Behold, if there is a white swelling in the skin, and it has turned the hair white, and there is raw flesh in the swelling,
- American Standard Version (ASV)
- and the priest shall look; and, behold, if there be a white rising in the skin, and it have turned the hair white, and there be quick raw flesh in the rising,
- Bible in Basic English (BBE)
- And if the priest sees that there is a white growth on the skin, and the hair is turned white, and there is diseased flesh in the growth,
- Darby Translation (DBY)
- and the priest shall look on him, and behold, there is a white rising in the skin, and it hath turned the hair white, and a trace of raw flesh is in the rising:
- Webster's Bible (WBS)
- And the priest shall see [him] : and behold, [if] the rising [is] white in the skin, and it hath turned the hair white, and [there is] raw flesh in the rising;
- Young's Literal Translation (YLT)
- and the priest hath seen, and lo, a white rising in the skin, and it hath turned the hair white, and a quickening of raw flesh [is] in the rising, —
Read in context
- 8ಯಾಜ ಕನು ಅದನ್ನು ನೋಡಿದಾಗ ಇಗೋ, ಕಜ್ಜಿಯ ಚರ್ಮವೇ ಹರಡಿರುವದಾದರೆ ಆಗ ಅವನು ಅಶುದ್ಧ ನೆಂದು ಯಾಜಕನು ನಿರ್ಣಯಿಸಬೇಕು. ಅದು ಕುಷ್ಠವಾಗಿರುವದು.
- 9ಕುಷ್ಠರೋಗವು ಮನುಷ್ಯನಲ್ಲಿ ಇರುವದಾದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರ ಬೇಕು.
- 10ಆಗ ಯಾಜಕನು ಅವನನ್ನು ನೋಡಬೇಕು; ಇಗೋ, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿಮಾಂಸವು ಇದ್ದರೆ
- 11ಅದು ಅವನ ಶರೀರದ ಚರ್ಮದಲ್ಲಿ ಒಂದು ಹಳೇ ಕುಷ್ಠವಾಗಿರುವದು. ಆಗ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು ಮತ್ತು ಅವನನ್ನು ಮುಚ್ಚಿಡಬಾರದು, ಅವನು ಅಶುದ್ಧನಾಗಿರುವನು.
- 12ಕುಷ್ಠವು ಒಡೆದು ಚರ್ಮದ ಹೊರಗೆ ಹರಡಿ ಕೊಂಡಿದ್ದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಅವನ ಪಾದದ ವರೆಗೂ ಹರಡಿರುವದನ್ನು ಯಾಜಕನು ಎಲ್ಲಿಯಾದರೂ ನೋಡಿದರೆ
Cross references
- 2 Kings 5:27 2 ಅರಸುಗಳು 5:27ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 2 Chronicles 26:19–20 2 ಪೂರ್ವಕಾಲವೃತ್ತಾಂತ 26:19–20ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- John 7:7 ಯೋಹಾನನು 7:7ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ.
- Amos 5:10 ಆಮೋಸ 5:10ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Numbers 12:10–12 ಅರಣ್ಯಕಾಂಡ 12:10–12ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು. ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ. ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Leviticus 13:14–15 ಯಾಜಕಕಾಂಡ 13:14–15ಆದರೆ ಹಸಿಮಾಂಸವು ಅವನಲ್ಲಿ ಕಾಣಿಸಿ ಕೊಂಡರೆ ಅವನು ಅಶುದ್ಧನಾಗುವನು. ಯಾಜ ಕನು ಹಸಿಮಾಂಸವನ್ನು ನೋಡಿ ಅವನು ಅಶುದ್ಧನೆಂದು ನುಡಿಯಬೇಕು; ಹಸಿಮಾಂಸವು ಅಶುದ್ಧವಾದದ್ದು, ಅದು ಕುಷ್ಠವೇ.
- Leviticus 13:24 ಯಾಜಕಕಾಂಡ 13:24ಇಲ್ಲವೆ ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಹಸಿಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಮಚ್ಚೆಯಾಗಿದ್ದರೆ
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Leviticus 13:3–4 ಯಾಜಕಕಾಂಡ 13:3–4ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು. ಅವನ ಶರೀರದ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು ಅದು ನೋಡುವದಕ್ಕೆ ಚರ್ಮ ಕ್ಕಿಂತಲೂ ಆಳವಾಗಿದ್ದು ಅಲ್ಲಿನ ಕೂದಲು ಬೆಳ್ಳಗಾಗ ದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಮುಚ್ಚಿಡಬೇಕು.