Leviticus · chapter 14 · verse 3
Leviticus 14:3 in Kannada
ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
Yaajakanu paaleyada aachege horatu hogabeku; igo, kushtha vyaadhiyu kushtharogiyannu bittu avanu svasthanaadanendu yaajakanu nodidare
Leviticus 14:3 in English
- King James Version (KJV)
- And the priest shall go forth out of the camp; and the priest shall look, and, behold, [if] the plague of leprosy be healed in the leper;
- World English Bible (WEB)
- and the priest shall go out of the camp. The priest shall examine him. Behold, if the plague of leprosy is healed in the leper,
- American Standard Version (ASV)
- and the priest shall go forth out of the camp; and the priest shall look; and, behold, if the plague of leprosy be healed in the leper,
- Bible in Basic English (BBE)
- And the priest is to go outside the tent-circle; and if, after looking, the priest sees that the mark of the disease has gone from him,
- Darby Translation (DBY)
- and the priest shall go out of the camp; and when the priest looketh, and behold, the sore of leprosy is healed in the leper,
- Webster's Bible (WBS)
- And the priest shall go forth out of the camp: and the priest shall look, and behold, [if] the plague of leprosy is healed in the leper;
- Young's Literal Translation (YLT)
- and the priest hath gone out unto the outside of the camp, and the priest hath seen, and lo, the plague of leprosy hath ceased from the leper,
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
- 3ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
- 4ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು.
- 5ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.
Cross references
- Leviticus 13:46 ಯಾಜಕಕಾಂಡ 13:46ಆ ವ್ಯಾಧಿಯು ಅವನಲ್ಲಿ ಇರುವಷ್ಟು ದಿನಗಳು ಹೊಲೆಯಾಗಿರುವನು; ಅವನು ಅಶುದ್ಧನು; ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Job 5:18 ಯೋಬನು 5:18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 2 Kings 5:14 2 ಅರಸುಗಳು 5:14ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು.
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Luke 17:15–19 ಲೂಕನು 17:15–19ಅವರಲ್ಲಿ ಒಬ್ಬನು ತಾನು ಸ್ವಸ್ಥ ವಾದದ್ದನ್ನು ನೋಡಿ ಹಿಂದಿರುಗಿ ಬಂದು ಮಹಾ ಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ ಅವನಿಗೆ--ಎದ್ದು ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿಯದೆ ಅಂದನು.
- Matthew 10:8 ಮತ್ತಾಯನು 10:8ರೋಗಿಗಳನ್ನು ಸ್ವಸ್ಥಮಾಡಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ಸತ್ತವರನ್ನು ಎಬ್ಬಿಸಿರಿ, ದೆವ್ವಗಳನ್ನು ಬಿಡಿಸಿರಿ; ನೀವು ಉಚಿತವಾಗಿ ಹೊಂದಿದ್ದೀರಿ, ಉಚಿತ ವಾಗಿ ಕೊಡಿರಿ.
- 2 Kings 5:3 2 ಅರಸುಗಳು 5:3ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು.
- Luke 7:22 ಲೂಕನು 7:22ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
- 2 Kings 5:7–8 2 ಅರಸುಗಳು 5:7–8ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು. ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
- Luke 4:27 ಲೂಕನು 4:27ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.