Leviticus · chapter 14 · verse 34
Leviticus 14:34 in Kannada
ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
Naanu nimage svaastyavaagi koduvadakkiruva kaanaan deshado lage neevu bandaaga nimage svaastyavaagi koduva maneyalli kushthavannu baramaadidaaga
Leviticus 14:34 in English
- King James Version (KJV)
- When ye be come into the land of Canaan, which I give to you for a possession, and I put the plague of leprosy in a house of the land of your possession;
- World English Bible (WEB)
- “When you have come into the land of Canaan, which I give to you for a possession, and I put a spreading mildew in a house in the land of your possession,
- American Standard Version (ASV)
- When ye are come into the land of Canaan, which I give to you for a possession, and I put the plague of leprosy in a house of the land of your possession;
- Bible in Basic English (BBE)
- When you have come into the land of Canaan which I will give you for your heritage, if I put the leper's disease on a house in the land of your heritage,
- Darby Translation (DBY)
- When ye come into the land of Canaan, which I give to you for a possession, and I put a leprous plague in a house of the land of your possession,
- Webster's Bible (WBS)
- When ye shall have come into the land of Canaan, which I give to you for a possession, and I put the plague of leprosy in a house of the land of your possession;
- Young's Literal Translation (YLT)
- 'When ye come in unto the land of Canaan, which I am giving to you for a possession, and I have put a plague of leprosy in a house [in] the land of your possession;
Read in context
- 32ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- 33ಕರ್ತನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- 35ಆ ಮನೆ ಯವನು ಯಾಜಕನ ಬಳಿಗೆ ಬಂದು--ನನ್ನ ಮನೆಯಲ್ಲಿ ವ್ಯಾಧಿಯಿರುವ ಹಾಗೆ ನನಗೆ ಕಾಣುತ್ತದೆ ಎಂದು ಹೇಳಬೇಕು.
- 36ಆಗ ಯಾಜಕನು ಆ ಮನೆಯಲ್ಲಿ ವ್ಯಾಧಿಯನ್ನು ನೋಡುವದಕ್ಕೆ ಹೋಗುವ ಮೊದಲು ಆ ಮನೆಯೊಳಗೆ ಇರುವವುಗಳು ಅಶುದ್ಧಮಾಡಲ್ಪಡ ದಂತೆ ಆ ಮನೆಯು ಬರಿದು ಮಾಡಲ್ಪಡಬೇಕೆಂದು ಆಜ್ಞಾಪಿಸಬೇಕು; ತರುವಾಯ ಯಾಜಕನು ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
Cross references
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,
- Genesis 17:8 ಆದಿಕಾಂಡ 17:8ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Deuteronomy 7:1–2 ಧರ್ಮೋಪದೇಶಕಾಂಡ 7:1–2ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 12:1 ಧರ್ಮೋಪದೇಶಕಾಂಡ 12:1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Genesis 13:17 ಆದಿಕಾಂಡ 13:17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.
- Numbers 32:22 ಅರಣ್ಯಕಾಂಡ 32:22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
- Numbers 35:10 ಅರಣ್ಯಕಾಂಡ 35:10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ