Leviticus · chapter 16 · verse 10
Leviticus 16:10 in Kannada
ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
Aadare paapa pashuvigaagi cheetu bidda aa aadannu tannondige praayashchittamaaduvada kkaagi kartana sannidhiyalli sajeevavaagi nillisi adannu paapa pashuvaagi kaadinalli hoguvante bittubidabeku.
Leviticus 16:10 in English
- King James Version (KJV)
- But the goat, on which the lot fell to be the scapegoat, shall be presented alive before the LORD, to make an atonement with him, [and] to let him go for a scapegoat into the wilderness.
- World English Bible (WEB)
- But the goat on which the lot fell for the scapegoat shall be presented alive before the LORD, to make atonement for him, to send him away as the scapegoat into the wilderness.
- American Standard Version (ASV)
- But the goat, on which the lot fell for Azazel, shall be set alive before Jehovah, to make atonement for him, to send him away for Azazel into the wilderness.
- Bible in Basic English (BBE)
- But the goat for Azazel is to be placed living before the Lord, for the taking away of sin, that it may be sent away for Azazel into the waste land.
- Darby Translation (DBY)
- And the goat upon which the lot fell for Azazel shall be set alive before Jehovah, to make atonement with it, to send it away as Azazel into the wilderness.
- Webster's Bible (WBS)
- But the goat on which the lot fell to be the scape-goat, shall be presented alive before the LORD, to make an atonement with him, [and] to let him go for a scape-goat into the wilderness.
- Young's Literal Translation (YLT)
- 'And the goat on which the lot for a goat of departure hath gone up is caused to stand living before Jehovah to make atonement by it, to send it away for a goat of departure into the wilderness.
Read in context
- 8ಆರೋನನು ಆ ಎರಡು ಆಡುಗಳಿಗಾಗಿ ಚೀಟು ಹಾಕಬೇಕು; ಒಂದು ಚೀಟು ಕರ್ತನಿಗೋಸ್ಕರ ಮತ್ತೊಂದು ಚೀಟು ಪಾಪ ಪಶುವಿ ಗೋಸ್ಕರ.
- 9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
- 10ಆದರೆ ಪಾಪ ಪಶುವಿಗಾಗಿ ಚೀಟು ಬಿದ್ದ ಆ ಆಡನ್ನು ತನ್ನೊಂದಿಗೆ ಪ್ರಾಯಶ್ಚಿತ್ತಮಾಡುವದ ಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ ಅದನ್ನು ಪಾಪ ಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.
- 11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
- 12ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು.
Cross references
- 1 John 2:2 1 ಯೋಹಾನನು 2:2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Leviticus 16:21–22 ಯಾಜಕಕಾಂಡ 16:21–22ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು. ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Isaiah 53:4–11 ಯೆಶಾಯ 53:4–11ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 3:25 ರೋಮಾಪುರದವರಿಗೆ 3:25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- Leviticus 14:7 ಯಾಜಕಕಾಂಡ 14:7ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
- Hebrews 7:26–27 ಇಬ್ರಿಯರಿಗೆ 7:26–27ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ. ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
Original words (Hebrew)
- goat · H8163שָׂעִיר sâʻîyr
- lot · H1486גּוֹרָל gôwrâl
- fell · H5927עָלָה ʻâlâh
- scapegoat · H5799עֲזָאזֵל ʻăzâʼzêl
- presented · H5975עָמַד ʻâmad
- alive · H2416חַי chay
- before · H6440פָּנִים pânîym
- atonement · H3722כָּפַר kâphar
- go · H7971שָׁלַח shâlach
- scapegoat · H5799עֲזָאזֵל ʻăzâʼzêl
- wilderness · H4057מִדְבָּר midbâr