Leviticus · chapter 16 · verse 30
Leviticus 16:30 in Kannada
ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
Yaakandare neevu kartana sannidhiyalli nimma ellaa paapagalinda shuddharaagiruvante nimmannu shuddheekarisuva haage aa dinadalli yaajakanu nimagoskara praayashchitta vannu maaduvanu.
Leviticus 16:30 in English
- King James Version (KJV)
- For on that day shall [the priest] make an atonement for you, to cleanse you, [that] ye may be clean from all your sins before the LORD.
- World English Bible (WEB)
- for on this day shall atonement be made for you, to cleanse you. You shall be clean from all your sins before the LORD.
- American Standard Version (ASV)
- for on this day shall atonement be made for you, to cleanse you; from all your sins shall ye be clean before Jehovah.
- Bible in Basic English (BBE)
- For on this day your sin will be taken away and you will be clean: you will be made free from all your sins before the Lord.
- Darby Translation (DBY)
- for on that day shall atonement be made for you, to cleanse you: from all your sins shall ye be clean before Jehovah.
- Webster's Bible (WBS)
- For on that day shall [the priest] make an atonement for you, to cleanse you, [that] ye may be clean from all your sins before the LORD.
- Young's Literal Translation (YLT)
- for on this day he maketh atonement for you, to cleanse you; from all your sins before Jehovah ye are clean;
Read in context
- 28ಅವು ಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಕ್ಕೆ ಬರಬೇಕು.
- 29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- 30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.
- 31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.
- 32ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.
Cross references
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- Psalm 51:2 ಕೀರ್ತನೆಗಳು 51:2ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
- Ephesians 5:26 ಎಫೆಸದವರಿಗೆ 5:26ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Hebrews 10:1–2 ಇಬ್ರಿಯರಿಗೆ 10:1–2ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Psalm 51:10 ಕೀರ್ತನೆಗಳು 51:10ಓ ದೇವರೇ, ಶುದ್ಧಹೃದಯವನ್ನು ನನ್ನಲ್ಲಿ ಸೃಷ್ಟಿಸು, ಸ್ಥಿರವಾದ ಆತ್ಮವನ್ನು ನನ್ನ ಅಂತರಂಗದಲ್ಲಿ ನೂತನಪಡಿಸು.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Hebrews 9:13–14 ಇಬ್ರಿಯರಿಗೆ 9:13–14ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.