Leviticus · chapter 17 · verse 4
Leviticus 17:4 in Kannada
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
Kartanige samarpisuva baliyaagi kartana sannidhiyalliruva sabheya gudaarada baagila balige taaradiddare aa manushyana mele raktaa paraadhavu horisalpadabeku; avanu rakta surisi ruvanu; aa manushyanu tanna janara madhyado laginda tegeduhaakalpadabeku.
Leviticus 17:4 in English
- King James Version (KJV)
- And bringeth it not unto the door of the tabernacle of the congregation, to offer an offering unto the LORD before the tabernacle of the LORD; blood shall be imputed unto that man; he hath shed blood; and that man shall be cut off from among his people:
- World English Bible (WEB)
- and hasn’t brought it to the door of the Tent of Meeting to offer it as an offering to the LORD before the LORD’s tabernacle: blood shall be imputed to that man. He has shed blood. That man shall be cut off from among his people.
- American Standard Version (ASV)
- and hath not brought it unto the door of the tent of meeting, to offer it as an oblation unto Jehovah before the tabernacle of Jehovah: blood shall be imputed unto that man; he hath shed blood; and that man shall be cut off from among his people:
- Bible in Basic English (BBE)
- And has not taken it to the door of the Tent of meeting, to make an offering to the Lord, before the Lord's House, its blood will be on him, for he has taken life, and he will be cut off from among his people:
- Darby Translation (DBY)
- and doth not bring it to the entrance of the tent of meeting to present it as an offering to Jehovah, before the tabernacle of Jehovah, blood shall be reckoned unto that man: he hath shed blood; and that man shall be cut off from among his people,
- Webster's Bible (WBS)
- And bringeth it not to the door of the tabernacle of the congregation, to offer an offering to the LORD before the tabernacle of the LORD; blood shall be imputed to that man; he hath shed blood; and that man shall be cut off from among his people:
- Young's Literal Translation (YLT)
- and unto the opening of the tent of meeting hath not brought it in to bring near an offering to Jehovah before the tabernacle of Jehovah, blood is reckoned to that man — blood he hath shed — and that man hath been cut off from the midst of his people;
Read in context
- 2ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೂ ಮಾತನಾಡಿ ಅವರಿಗೆ ಹೀಗೆ ಹೇಳು--ಕರ್ತನು ನಿಮಗೆ ಆಜ್ಞಾಪಿಸಿ ಹೇಳುವದೇನಂದರೆ,
- 3ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
- 4ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
- 5ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
- 6ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
Cross references
- Ezekiel 20:40 ಯೆಹೆಜ್ಕೇಲನು 20:40ನನ್ನ ಪರಿಶುದ್ಧ ಪರ್ವತದಲ್ಲಿ ಅಂದರೆ ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನ ದವರೆಲ್ಲರೂ ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿ ಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ ನಿಮ್ಮ ಎತ್ತುವ ಅರ್ಪಣೆಗಳನ್ನೂ ನಿಮ್ಮ ಕಾಣಿಕೆಗಳ ಪ್ರಥಮ ಫಲ ವನ್ನೂ ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.
- John 10:7 ಯೋಹಾನನು 10:7ಯೇಸು ತಿರಿಗಿ ಅವರಿಗೆ--ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗ ಲಾಗಿದ್ದೇನೆ.
- Genesis 17:14 ಆದಿಕಾಂಡ 17:14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- John 10:9 ಯೋಹಾನನು 10:9ನಾನೇ ಆಬಾಗಲು; ನನ್ನ ಮೂಲಕವಾಗಿ ಯಾವನಾದರೂ ಪ್ರವೇಶಿಸಿದರೆ ಅವನು ರಕ್ಷಣೆ ಹೊಂದುವನು; ಇದ ಲ್ಲದೆ ಅವನು ಒಳಗೆ ಹೋಗುತ್ತಾನೆ, ಹೊರಗೆ ಬರು ತ್ತಾನೆ ಮತ್ತು ಮೇವನ್ನು ಕಂಡುಕೊಳ್ಳುತ್ತಾನೆ.
- Deuteronomy 12:5–21 ಧರ್ಮೋಪದೇಶಕಾಂಡ 12:5–21ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು. ನಾವು ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡುವಂತೆ ನೀವು ಮಾಡಬೇಡಿರಿ. ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ; ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ. ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು. ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು. ರಕ್ತವನ್ನು ಮಾತ್ರ ತಿನ್ನಬೇಡಿರಿ, ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು. ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ. ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ. ನಿನ್ನ ದೇವರಾದ ಕರ್ತನು ನಿನಗೆ ವಾಗ್ದಾನ ಮಾಡಿದ ಹಾಗೆ ನಿನ್ನ ಮೇರೆಯನ್ನು ವಿಸ್ತಾರಮಾಡು ವಾಗ ನೀನು--ನನ್ನ ಪ್ರಾಣವು ಮಾಂಸವನ್ನು ತಿನ್ನ ಬೇಕೆಂದು ನಾನು ಆಶೆಪಡುವದರಿಂದ ನಾನು ಮಾಂಸ ವನ್ನು ತಿನ್ನುವೆನು ಎಂದು ಹೇಳಿ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ತಿನ್ನಬಹುದು; ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ಕರ್ತನು ನಿನಗೆ ಕೊಟ್ಟ ಪಶು ಕುರಿಗಳನ್ನು ನಾನು ನಿನಗೆ ಆಜ್ಞಾಪಿಸಿದಂತೆ ಕೊಯ್ದು ನಿನ್ನ ಬಾಗಲುಗಳಲ್ಲಿ ನಿನಗೆ ಮನಸ್ಸಿದ್ದಷ್ಟು ಉಣ್ಣಬಹುದು.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Exodus 12:15 ವಿಮೋಚನಕಾಂಡ 12:15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
- Leviticus 20:16 ಯಾಜಕಕಾಂಡ 20:16ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.
- Leviticus 20:3 ಯಾಜಕಕಾಂಡ 20:3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- Leviticus 20:18 ಯಾಜಕಕಾಂಡ 20:18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
Original words (Hebrew)
- bringeth · H935בּוֹא bôwʼ
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- offer · H7126קָרַב qârab
- offering · H7133קׇרְבָּן qorbân
- before · H6440פָּנִים pânîym
- tabernacle · H4908מִשְׁכָּן mishkân
- blood · H1818דָּם dâm
- imputed · H2803חָשַׁב châshab
- man · H376אִישׁ ʼîysh
- shed · H8210שָׁפַךְ shâphak
- blood · H1818דָּם dâm
- man · H376אִישׁ ʼîysh
- off · H3772כָּרַת kârath
- among · H7130קֶרֶב qereb
- people · H5971עַם ʻam