Leviticus · chapter 17 · verse 5
Leviticus 17:5 in Kannada
ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
Israayel makkalu taavu bayalinalli samarpisuva baligalannu kartanige sabheya gudaarada baagilina baliyalli yaajakana balige tandu kartanige samaadhaanada baliyaagi samarpisabeku.
Leviticus 17:5 in English
- King James Version (KJV)
- To the end that the children of Israel may bring their sacrifices, which they offer in the open field, even that they may bring them unto the LORD, unto the door of the tabernacle of the congregation, unto the priest, and offer them [for] peace offerings unto the LORD.
- World English Bible (WEB)
- This is to the end that the children of Israel may bring their sacrifices, which they sacrifice in the open field, that they may bring them to the LORD, to the door of the Tent of Meeting, to the priest, and sacrifice them for sacrifices of peace offerings to the LORD.
- American Standard Version (ASV)
- to the end that the children of Israel may bring their sacrifices, which they sacrifice in the open field, even that they may bring them unto Jehovah, unto the door of the tent of meeting, unto the priest, and sacrifice them for sacrifices of peace-offerings unto Jehovah.
- Bible in Basic English (BBE)
- So that the children of Israel may take to the Lord, to the door of the Tent of meeting and to the priest, the offerings which they have put to death in the open country, and that they may make their peace-offerings to the Lord.
- Darby Translation (DBY)
- to the end that the children of Israel bring their sacrifices, which they sacrifice in the open field, that they bring them to Jehovah, unto the entrance of the tent of meeting, unto the priest, and sacrifice them as sacrifices of peace-offerings to Jehovah.
- Webster's Bible (WBS)
- To the end that the children of Israel may bring their sacrifices which they offer in the open field, even that they may bring them to the LORD, to the door of the tabernacle of the congregation, to the priest, and offer them [for] peace-offerings to the LORD.
- Young's Literal Translation (YLT)
- so that the sons of Israel do bring in their sacrifices which they are sacrificing on the face of the field, yea, they have brought them in to Jehovah, unto the opening of the tent of meeting, unto the priest, and they have sacrificed sacrifices of peace-offerings to Jehovah with them.
Read in context
- 3ಇಸ್ರಾಯೇಲಿನ ಮನೆತನದಲ್ಲಿ ಯಾವನಾದರೂ ಒಂದು ಎತ್ತನ್ನಾಗಲಿ ಕುರಿಮರಿಯ ನ್ನಾಗಲಿ ಆಡನ್ನಾಗಲಿ ಪಾಳೆಯದೊಳಗಾಗಲಿ ಹೊರ ಗಾಗಲಿ ವಧಿಸಿ
- 4ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
- 5ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
- 6ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
- 7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
Cross references
- Genesis 21:33 ಆದಿಕಾಂಡ 21:33ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
- 2 Kings 17:10 2 ಅರಸುಗಳು 17:10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 2 Chronicles 28:4 2 ಪೂರ್ವಕಾಲವೃತ್ತಾಂತ 28:4ಹಾಗೆಯೇ ಅವನು ಬೆಟ್ಟಗಳಲ್ಲಿಯೂ ಮೇಡುಗಳ ಮೇಲೆಯೂ ಎಲ್ಲಾ ಹಸುರು ಗಿಡಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
- Exodus 24:5 ವಿಮೋಚನಕಾಂಡ 24:5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- Leviticus 7:11–21 ಯಾಜಕಕಾಂಡ 7:11–21ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು. ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- 2 Kings 16:4 2 ಅರಸುಗಳು 16:4ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
- Leviticus 3:1–17 ಯಾಜಕಕಾಂಡ 3:1–17ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Genesis 22:13 ಆದಿಕಾಂಡ 22:13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- Deuteronomy 12:2 ಧರ್ಮೋಪದೇಶಕಾಂಡ 12:2ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
- 1 Kings 14:23 1 ಅರಸುಗಳು 14:23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- bring · H935בּוֹא bôwʼ
- sacrifices · H2077זֶבַח zebach
- offer · H2076זָבַח zâbach
- open · H6440פָּנִים pânîym
- field · H7704שָׂדֶה sâdeh
- bring · H935בּוֹא bôwʼ
- door · H6607פֶּתַח pethach
- tabernacle · H168אֹהֶל ʼôhel
- congregation · H4150מוֹעֵד môwʻêd
- priest · H3548כֹּהֵן kôhên
- offer · H2076זָבַח zâbach
- peace · H8002שֶׁלֶם shelem
- offerings · H2077זֶבַח zebach