Leviticus · chapter 17 · verse 7
Leviticus 17:7 in Kannada
ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
Avaru jaaratva maaduvante yaara hinde hodaro aa devva galige innendigoo avaru tamma yajnyagalannu samarpisabaaradu. Idu avarige avara tala talaantaragala varege shaashvatavaada niyamavaagi ruvadu.
Leviticus 17:7 in English
- King James Version (KJV)
- And they shall no more offer their sacrifices unto devils, after whom they have gone a whoring. This shall be a statute for ever unto them throughout their generations.
- World English Bible (WEB)
- They shall no more sacrifice their sacrifices to the goat idols, after which they play the prostitute. This shall be a statute forever to them throughout their generations.’
- American Standard Version (ASV)
- And they shall no more sacrifice their sacrifices unto the he-goats, after which they play the harlot. This shall be a statute forever unto them throughout their generations.
- Bible in Basic English (BBE)
- And let them make no more offerings to evil spirits, after which they have gone, turning away from the Lord. Let this be a law to them for ever, through all their generations.
- Darby Translation (DBY)
- And they shall no more sacrifice their sacrifices unto demons, after whom they go a whoring. This shall be an everlasting statute unto them for their generations.
- Webster's Bible (WBS)
- And they shall no more offer their sacrifices to idols, with which they have committed idolatry: This shall be a statute for ever to them throughout their generations.
- Young's Literal Translation (YLT)
- and they sacrifice not any more their sacrifices to goats after which they are going a-whoring; a statute age-during is this to them, to their generations.
Read in context
- 5ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
- 6ಯಾಜಕನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಯಜ್ಞವೇದಿಯ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಕರ್ತನಿಗೆ ಸುಗಂಧವಾಸನೆಯಾಗಿ ಸುಡಬೇಕು.
- 7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- 8ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ
- 9ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
Cross references
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Exodus 34:15 ವಿಮೋಚನಕಾಂಡ 34:15ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು.
- 2 Chronicles 11:15 2 ಪೂರ್ವಕಾಲವೃತ್ತಾಂತ 11:15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- Deuteronomy 32:17 ಧರ್ಮೋಪದೇಶಕಾಂಡ 32:17ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Psalm 106:37 ಕೀರ್ತನೆಗಳು 106:37ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು.
- Exodus 22:20 ವಿಮೋಚನಕಾಂಡ 22:20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- Revelation 9:20 ಪ್ರಕಟನೆ 9:20ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
- Ezekiel 23:8 ಯೆಹೆಜ್ಕೇಲನು 23:8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- Leviticus 20:5 ಯಾಜಕಕಾಂಡ 20:5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- Exodus 32:8 ವಿಮೋಚನಕಾಂಡ 32:8ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
- Revelation 17:1–5 ಪ್ರಕಟನೆ 17:1–5ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.