Leviticus · chapter 18 · verse 3
Leviticus 18:3 in Kannada
ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
Neevu vaasavaagidda aiguptadeshada krutyagalante maadabaaradu; naanu nimmannu taruvadakkiruva kaanaandeshada krutyagalante neevu maadabaaradu illave neevu avara niyamagaliganusaaravoo nade yabaaradu.
Leviticus 18:3 in English
- King James Version (KJV)
- After the doings of the land of Egypt, wherein ye dwelt, shall ye not do: and after the doings of the land of Canaan, whither I bring you, shall ye not do: neither shall ye walk in their ordinances.
- World English Bible (WEB)
- You shall not do as they do in the land of Egypt, where you lived. You shall not do as they do in the land of Canaan, where I am bringing you. You shall not follow their statutes.
- American Standard Version (ASV)
- After the doings of the land of Egypt, wherein ye dwelt, shall ye not do: and after the doings of the land of Canaan, whither I bring you, shall ye not do; neither shall ye walk in their statutes.
- Bible in Basic English (BBE)
- You may not do those things which were done in the land of Egypt where you were living; and you may not do those things which are done in the land of Canaan where I am taking you, or be guided in your behaviour by their rules.
- Darby Translation (DBY)
- After the doings of the land of Egypt, wherein ye dwelt, shall ye not do; and after the doings of the land of Canaan, whither I bring you, shall ye not do; neither shall ye walk in their customs.
- Webster's Bible (WBS)
- After the doings of the land of Egypt in which ye dwelt, shall ye not do: and after the doings of the land of Canaan whither I bring you, shall ye not do: neither shall ye walk in their ordinances.
- Young's Literal Translation (YLT)
- according to the work of the land of Egypt in which ye have dwelt ye do not, and according to the work of the land of Canaan whither I am bringing you in, ye do not, and in their statutes ye walk not.
Read in context
- 1ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- 2ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.
- 3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
- 4ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
Cross references
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- 1 Peter 4:2–4 1 ಪೇತ್ರನು 4:2–4ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು. ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Ezekiel 23:8 ಯೆಹೆಜ್ಕೇಲನು 23:8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- Ezekiel 20:7–8 ಯೆಹೆಜ್ಕೇಲನು 20:7–8ಆಮೇಲೆ ನಾನು ಅವರಿಗೆ ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಿ. ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿ ಕೊಳ್ಳಬೇಡಿರಿ. ನಿಮ್ಮ ದೇವರಾದ ಕರ್ತನು ನಾನಾಗಿರು ವೆನು ಅಂದೆನು. ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Deuteronomy 12:4 ಧರ್ಮೋಪದೇಶಕಾಂಡ 12:4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
- Jeremiah 10:2–3 ಯೆರೆಮೀಯ 10:2–3ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ, ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
- Psalm 106:35 ಕೀರ್ತನೆಗಳು 106:35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- Ephesians 5:7–11 ಎಫೆಸದವರಿಗೆ 5:7–11ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ. ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ. ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ. ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- Leviticus 18:24–30 ಯಾಜಕಕಾಂಡ 18:24–30ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು. ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
Original words (Hebrew)
- doings · H4639מַעֲשֶׂה maʻăseh
- land · H776אֶרֶץ ʼerets
- Egypt · H4714מִצְרַיִם Mitsrayim
- dwelt · H3427יָשַׁב yâshab
- do · H6213עָשָׂה ʻâsâh
- doings · H4639מַעֲשֶׂה maʻăseh
- land · H776אֶרֶץ ʼerets
- Canaan · H3667כְּנַעַן Kᵉnaʻan
- bring · H935בּוֹא bôwʼ
- do · H6213עָשָׂה ʻâsâh
- walk · H3212יָלַךְ yâlak
- ordinances · H2708חֻקָּה chuqqâh