Leviticus · chapter 19 · verse 13
Leviticus 19:13 in Kannada
ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
Ninna nereyavanannu vanchisabaaradu avanannu sulukollabaaradu. Kooliyavana kooliyu ninna baliyalli munjaaneya varege irabaaradu.
Leviticus 19:13 in English
- King James Version (KJV)
- Thou shalt not defraud thy neighbour, neither rob [him:] the wages of him that is hired shall not abide with thee all night until the morning.
- World English Bible (WEB)
- “‘You shall not oppress your neighbor, nor rob him. “‘The wages of a hired servant shall not remain with you all night until the morning.
- American Standard Version (ASV)
- Thou shalt not oppress thy neighbor, nor rob him: the wages of a hired servant shall not abide with thee all night until the morning.
- Bible in Basic English (BBE)
- Do not be cruel to your neighbour or take what is his; do not keep back a servant's payment from him all night till the morning.
- Darby Translation (DBY)
- Thou shalt not oppress thy neighbour, neither rob him. The wages of the hired servant shall not abide with thee all night until the morning.
- Webster's Bible (WBS)
- Thou shalt not defraud thy neighbor, neither rob [him] : the wages of him that is hired shall not abide with thee all night until the morning.
- Young's Literal Translation (YLT)
- 'Thou dost not oppress thy neighbour, nor take plunder; the wages of the hireling doth not remain with thee till morning.
Read in context
- 11ನೀವು ಕದಿಯಬಾರದು; ಒಬ್ಬರಿಗೊಬ್ಬರು ಸುಳ್ಳಾಡಿ ಮೋಸಮಾಡಬಾರದು.
- 12ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
- 13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- 14ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- 15ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
Cross references
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
- Jeremiah 22:13 ಯೆರೆಮೀಯ 22:13ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
- Proverbs 20:10 ಜ್ಞಾನೋಕ್ತಿಗಳು 20:10ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.
- Ezekiel 22:29 ಯೆಹೆಜ್ಕೇಲನು 22:29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- Mark 10:19 ಮಾರ್ಕನು 10:19ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- Jeremiah 22:3 ಯೆರೆಮೀಯ 22:3ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
- Exodus 22:15 ವಿಮೋಚನಕಾಂಡ 22:15ಆದರೆ ಯಜಮಾನನು ಅದರ ಸಂಗಡ ಇದ್ದರೆ ಬದಲು ಕೊಡದೆ ಇರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಬಂದಿರುವದು.
- Exodus 22:21 ವಿಮೋಚನಕಾಂಡ 22:21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
- Exodus 22:24–27 ವಿಮೋಚನಕಾಂಡ 22:24–27ಆಗ ನನ್ನ ಕೋಪವು ಉರಿಯುವದು. ಕತ್ತಿಯಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗಿ ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು. ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ. ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.