Leviticus · chapter 19 · verse 26
Leviticus 19:26 in Kannada
ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
Neevu rakta dondige yaavadannoo tinnabaaradu; idallade mantravannu upayogisabaaradu, shakunagalannu nodabaaradu.
Leviticus 19:26 in English
- King James Version (KJV)
- Ye shall not eat [any thing] with the blood: neither shall ye use enchantment, nor observe times.
- World English Bible (WEB)
- “‘You shall not eat any meat with the blood still in it. You shall not use enchantments, nor practice sorcery.
- American Standard Version (ASV)
- Ye shall not eat anything with the blood: neither shall ye use enchantments, nor practise augury.
- Bible in Basic English (BBE)
- Nothing may be used for food with its blood in it; you may not make use of strange arts, or go in search of signs and wonders.
- Darby Translation (DBY)
- Ye shall eat nothing with the blood. — Ye shall not practise enchantment, nor use auguries.
- Webster's Bible (WBS)
- Ye shall not eat [any thing] with the blood: neither shall ye use enchantment, nor observe times.
- Young's Literal Translation (YLT)
- 'Ye do not eat with the blood; ye do not enchant, nor observe clouds.
Read in context
- 24ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಕರ್ತನ ಸ್ತೋತ್ರ ಕ್ಕಾಗಿ ಪರಿಶುದ್ಧವಾಗಿರುವದು.
- 25ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
- 27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
- 28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
Cross references
- Deuteronomy 18:10–14 ಧರ್ಮೋಪದೇಶಕಾಂಡ 18:10–14ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು. ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು. ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- 2 Kings 17:17 2 ಅರಸುಗಳು 17:17ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
- 2 Chronicles 33:6 2 ಪೂರ್ವಕಾಲವೃತ್ತಾಂತ 33:6ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
- 2 Kings 21:6 2 ಅರಸುಗಳು 21:6ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
- Deuteronomy 12:23 ಧರ್ಮೋಪದೇಶಕಾಂಡ 12:23ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
- Leviticus 17:10–14 ಯಾಜಕಕಾಂಡ 17:10–14ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ. ಆದಕಾರಣ ನಿಮ್ಮಲ್ಲಿ ಯಾವನಾ ದರೂ ರಕ್ತವನ್ನು ತಿನ್ನಬಾರದೆಂದು ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನು ರಕ್ತವನ್ನು ತಿನ್ನಬಾರ ದೆಂದು ನಾನು ಇಸ್ರಾಯೇಲ್ ಮಕ್ಕಳಿಗೆ ಹೇಳಿದೆನು. ಇದಲ್ಲದೆ ಇಸ್ರಾಯೇಲ್ ಮಕ್ಕಳಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವದಕ್ಕಾಗಿ ಬೇಟೆಯಾಡಿ ಯಾವದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿ ನಿಂದ ಮುಚ್ಚಬೇಕು. ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
- Leviticus 7:26 ಯಾಜಕಕಾಂಡ 7:26ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
- Leviticus 3:17 ಯಾಜಕಕಾಂಡ 3:17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Jeremiah 10:2 ಯೆರೆಮೀಯ 10:2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- Exodus 8:7 ವಿಮೋಚನಕಾಂಡ 8:7ಆದರೆ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿ ಕಪ್ಪೆಗಳನ್ನು ಐಗುಪ್ತದೇಶದ ಮೇಲೆ ಬರಮಾಡಿದರು.
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Samuel 15:23 1 ಸಮುವೇಲನು 15:23ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು.