Leviticus · chapter 19 · verse 37
Leviticus 19:37 in Kannada
ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
Aadadarinda nanna ellaa niyamagalannoo nyaaya galannoo kaikondu avugalannu maadabeku; naane kartanu endu helidanu.
Leviticus 19:37 in English
- King James Version (KJV)
- Therefore shall ye observe all my statutes, and all my judgments, and do them: I [am] the LORD.
- World English Bible (WEB)
- “‘You shall observe all my statutes and all my ordinances, and do them. I am the LORD.’”
- American Standard Version (ASV)
- And ye shall observe all my statutes, and all mine ordinances, and do them: I am Jehovah.
- Bible in Basic English (BBE)
- You are to keep all my rules and my decisions and do them: I am the Lord.
- Darby Translation (DBY)
- And ye shall observe all my statutes, and all mine ordinances, and do them: I am Jehovah.
- Webster's Bible (WBS)
- Therefore shall ye observe all my statutes, and all my judgments, and do them: I [am] the LORD.
- Young's Literal Translation (YLT)
- and ye have observed all my statutes, and all my judgments, and have done them; I [am] Jehovah.'
Read in context
- 35ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
- 36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- 37ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
Cross references
- Deuteronomy 8:1 ಧರ್ಮೋಪದೇಶಕಾಂಡ 8:1ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
- Leviticus 18:4–5 ಯಾಜಕಕಾಂಡ 18:4–5ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- 1 John 3:22–23 1 ಯೋಹಾನನು 3:22–23ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ. ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Psalm 119:34 ಕೀರ್ತನೆಗಳು 119:34ನನಗೆ ಗ್ರಹಿಕೆಯನ್ನು ಕೊಡು; ಆಗ ನಿನ್ನ ನ್ಯಾಯಪ್ರಮಾಣವನ್ನು ಕೈಕೊಂಡು ಹೌದು, ಪೂರ್ಣಹೃದಯದಿಂದ ಅದನ್ನು ಕೈಕೊಳ್ಳುವೆನು.
- Deuteronomy 5:1 ಧರ್ಮೋಪದೇಶಕಾಂಡ 5:1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
- Deuteronomy 6:1–2 ಧರ್ಮೋಪದೇಶಕಾಂಡ 6:1–2ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- Deuteronomy 4:5–6 ಧರ್ಮೋಪದೇಶಕಾಂಡ 4:5–6ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ. ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- Deuteronomy 4:1–2 ಧರ್ಮೋಪದೇಶಕಾಂಡ 4:1–2ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ. ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.