Leviticus · chapter 19 · verse 4
Leviticus 19:4 in Kannada
ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
Neevu vigraha gala kadege tirugikollabediri nimagoskaravaagi erakada devarugalannu maadikollabediri; nimma devaraagiruva kartanu naane.
Leviticus 19:4 in English
- King James Version (KJV)
- Turn ye not unto idols, nor make to yourselves molten gods: I [am] the LORD your God.
- World English Bible (WEB)
- “‘Don’t turn to idols, nor make molten gods for yourselves. I am the LORD your God.
- American Standard Version (ASV)
- Turn ye not unto idols, nor make to yourselves molten gods: I am Jehovah your God.
- Bible in Basic English (BBE)
- Do not go after false gods, and do not make metal images of gods for yourselves: I am the Lord your God.
- Darby Translation (DBY)
- Ye shall not turn unto idols, and ye shall not make to yourselves molten gods: I am Jehovah your God.
- Webster's Bible (WBS)
- Turn ye not to idols, nor make to yourselves molten gods: I [am] the LORD your God.
- Young's Literal Translation (YLT)
- 'Ye do not turn unto the idols, and a molten god ye do not make to yourselves; I [am] Jehovah your God.
Read in context
- 2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.
- 3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 5ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
- 6ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
Cross references
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 34:17 ವಿಮೋಚನಕಾಂಡ 34:17ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- Psalm 115:4–7 ಕೀರ್ತನೆಗಳು 115:4–7ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- Deuteronomy 27:15 ಧರ್ಮೋಪದೇಶಕಾಂಡ 27:15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- Psalm 96:5 ಕೀರ್ತನೆಗಳು 96:5ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- 1 Corinthians 10:14 1 ಕೊರಿಂಥದವರಿಗೆ 10:14ಆದದರಿಂದ ನನ್ನ ಅತಿ ಪ್ರಿಯವಾದವರೇ, ವಿಗ್ರಹಾರಾಧನೆಯಿಂದ ಓಡಿಹೋಗಿರಿ.
- 1 John 5:21 1 ಯೋಹಾನನು 5:21ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- Exodus 20:3–5 ವಿಮೋಚನಕಾಂಡ 20:3–5ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು. ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Exodus 32:4 ವಿಮೋಚನಕಾಂಡ 32:4ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
- Haggai 2:18 ಹಗ್ಗಾಯ 2:18ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.