Leviticus · chapter 19 · verse 5
Leviticus 19:5 in Kannada
ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
Neevu nimma devarige samaadhaanada baligala yajnyavannu samarpisuvadaadare neevu adannu svaichchheyinda arpisabeku.
Leviticus 19:5 in English
- King James Version (KJV)
- And if ye offer a sacrifice of peace offerings unto the LORD, ye shall offer it at your own will.
- World English Bible (WEB)
- “‘When you offer a sacrifice of peace offerings to the LORD, you shall offer it so that you may be accepted.
- American Standard Version (ASV)
- And when ye offer a sacrifice of peace-offerings unto Jehovah, ye shall offer it that ye may be accepted.
- Bible in Basic English (BBE)
- And when you give a peace offering to the Lord, do it in the way which is pleasing to the Lord.
- Darby Translation (DBY)
- And if ye sacrifice a sacrifice of peace-offering to Jehovah, ye shall sacrifice it for your acceptance.
- Webster's Bible (WBS)
- And if ye offer a sacrifice of peace-offerings to the LORD, ye shall offer it at your own will.
- Young's Literal Translation (YLT)
- 'And when ye sacrifice a sacrifice of peace-offerings to Jehovah, at your pleasure ye do sacrifice it;
Read in context
- 3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- 4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 5ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
- 6ಅದನ್ನು ನೀವು ಸಮರ್ಪಿಸಿದ ದಿನ ದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು; ಆದರೆ ಅದು ಮೂರನೆಯ ದಿನದ ವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.
- 7ಆದರೆ ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ ಅದು ಅಸಹ್ಯವಾದದ್ದು; ಅದು ಅಂಗೀಕೃತವಾಗುವದಿಲ್ಲ.
Cross references
- Leviticus 22:29 ಯಾಜಕಕಾಂಡ 22:29ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
- Leviticus 22:19 ಯಾಜಕಕಾಂಡ 22:19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
- Leviticus 7:16 ಯಾಜಕಕಾಂಡ 7:16ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- Leviticus 22:23 ಯಾಜಕಕಾಂಡ 22:23ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
- Ezekiel 45:15–17 ಯೆಹೆಜ್ಕೇಲನು 45:15–17ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ. ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು. ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
- Ephesians 2:13–14 ಎಫೆಸದವರಿಗೆ 2:13–14ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
- Leviticus 3:1–17 ಯಾಜಕಕಾಂಡ 3:1–17ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- 2 Chronicles 31:2 2 ಪೂರ್ವಕಾಲವೃತ್ತಾಂತ 31:2ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
- Ezekiel 46:12 ಯೆಹೆಜ್ಕೇಲನು 46:12ಪ್ರಧಾನನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಕರ್ತನಿಗೆ ಸಿದ್ಧಮಾಡು ವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಲನ್ನು ಅವನಿಗೆ ತೆರೆಯಬೇಕು; ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ತು ದಿನದಲ್ಲಿ ಮಾಡಿದ ಹಾಗೆ ಸಿದ್ದಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಲನ್ನು ಮುಚ್ಚಬೇಕು.
- Exodus 24:5 ವಿಮೋಚನಕಾಂಡ 24:5ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು.
- Ezekiel 46:2 ಯೆಹೆಜ್ಕೇಲನು 46:2ಪ್ರಭುವು ಆ ಬಾಗಲಿನ ದ್ವಾರಾಂಗಣ ಮಾರ್ಗವಾಗಿ ಹೊರಗಿ ನಿಂದ ಪ್ರವೇಶಿಸಿ ಬಾಗಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು, ಆಗ ಯಾಜಕರು ಅವನ ದಹನಬಲಿಯನ್ನು ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು; ಬಾಗ ಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಲು ಸಂಜೆಯವರೆಗೂ ಮುಚ್ಚಲ್ಪಡಬಾರದು;