Leviticus · chapter 2 · verse 1
Leviticus 2:1 in Kannada
ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
Yaaraadaroo kartanige aahaara samarpaneyannu samarpisuvadaadare avana samarpaneyu nayavaada hittinaddaagira beku. Avanu adara mele enneyannu suriya beku; adara mele saambraaniyannu haakabeku.
Leviticus 2:1 in English
- King James Version (KJV)
- And when any will offer a meat offering unto the LORD, his offering shall be [of] fine flour; and he shall pour oil upon it, and put frankincense thereon:
- World English Bible (WEB)
- “‘When anyone offers an offering of a meal offering to the LORD, his offering shall be of fine flour. He shall pour oil on it, and put frankincense on it.
- American Standard Version (ASV)
- And when any one offereth an oblation of a meal-offering unto Jehovah, his oblation shall be of fine flour; and he shall pour oil upon it, and put frankincense thereon:
- Bible in Basic English (BBE)
- And when anyone makes a meal offering to the Lord, let his offering be of the best meal, with oil on it and perfume:
- Darby Translation (DBY)
- And when any one will present an oblation to Jehovah, his offering shall be of fine flour; and he shall pour oil on it, and put frankincense thereon.
- Webster's Bible (WBS)
- And when any will offer a meat-offering to the LORD, his offering shall be [of] fine flour; and he shall pour oil upon it, and put frankincense upon it.
- Young's Literal Translation (YLT)
- 'And when a person bringeth near an offering, a present to Jehovah, of flour is his offering, and he hath poured on it oil, and hath put on it frankincense;
Read in context
- 1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- 2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- 3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.
Cross references
- Leviticus 6:14–18 ಯಾಜಕಕಾಂಡ 6:14–18ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು. ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು. ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು. ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Revelation 8:3 ಪ್ರಕಟನೆ 8:3ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Leviticus 9:17 ಯಾಜಕಕಾಂಡ 9:17ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
- Numbers 7:19 ಅರಣ್ಯಕಾಂಡ 7:19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- Jude 1:20 ಯೂದನು 1:20ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ.
- Leviticus 2:4–8 ಯಾಜಕಕಾಂಡ 2:4–8ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Leviticus 2:15–16 ಯಾಜಕಕಾಂಡ 2:15–16ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?
- Exodus 29:2 ವಿಮೋಚನಕಾಂಡ 29:2ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ
- Leviticus 7:10–12 ಯಾಜಕಕಾಂಡ 7:10–12ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು. ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.