Leviticus · chapter 2 · verse 11
Leviticus 2:11 in Kannada
ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
Kartanige neenu taruva aahaara samarpaneyu yaavadoo huliyinda maadiddaagirabaaradu; kartanige neevu benkiyinda maaduva ellaa samarpanegalalli huliyannaagali jenannaagali sudabaaradu.
Leviticus 2:11 in English
- King James Version (KJV)
- No meat offering, which ye shall bring unto the LORD, shall be made with leaven: for ye shall burn no leaven, nor any honey, in any offering of the LORD made by fire.
- World English Bible (WEB)
- “‘No meal offering which you shall offer to the LORD shall be made with yeast; for you shall burn no yeast, nor any honey, as an offering made by fire to the LORD.
- American Standard Version (ASV)
- No meal-offering, which ye shall offer unto Jehovah, shall be made with leaven; for ye shall burn no leaven, nor any honey, as an offering made by fire unto Jehovah.
- Bible in Basic English (BBE)
- No meal offering which you give to the Lord is to be made with leaven; no leaven or honey is to be burned as an offering made by fire to the Lord.
- Darby Translation (DBY)
- No oblation which ye shall present to Jehovah shall be made with leaven; for no leaven and no honey shall ye burn [in] any fire-offering to Jehovah.
- Webster's Bible (WBS)
- No meat-offering which ye shall bring to the LORD shall be made with leaven: for ye shall burn no leaven, nor any honey, in any offering of the LORD made by fire.
- Young's Literal Translation (YLT)
- No present which ye bring near to Jehovah is made fermented, for with any leaven or any honey ye perfume no fire-offering to Jehovah.
Read in context
- 9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
- 10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- 11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
- 12ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು.
- 13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
Cross references
- Luke 12:1 ಲೂಕನು 12:1ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
- Galatians 5:9 ಗಲಾತ್ಯದವರಿಗೆ 5:9ಸ್ವಲ್ಪ ಹುಳಿಯಿಂದ ಕಣಿಕ ವೆಲ್ಲಾ ಹುಳಿಯಾಗುವದು.
- Exodus 23:18 ವಿಮೋಚನಕಾಂಡ 23:18ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
- Proverbs 24:13 ಜ್ಞಾನೋಕ್ತಿಗಳು 24:13ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
- Proverbs 25:27 ಜ್ಞಾನೋಕ್ತಿಗಳು 25:27ಜೇನನ್ನು ಹೆಚ್ಚಾಗಿ ತಿನ್ನುವದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವದು ಗೌರವವಲ್ಲ.ತನ್ನ ಸ್ವಂತ ಮನಸ್ಸನ್ನು ಆಳದಿರುವವನು ಮುರಿ ಯಲ್ಪಟ್ಟು ಬಿದ್ದುಹೋಗಿ, ಗೋಡೆಗಳಿಲ್ಲದ ಪಟ್ಟಣಕ್ಕೆ ಸಮಾನ.
- Mark 8:15 ಮಾರ್ಕನು 8:15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- Proverbs 25:16 ಜ್ಞಾನೋಕ್ತಿಗಳು 25:16ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
- Leviticus 6:16–17 ಯಾಜಕಕಾಂಡ 6:16–17ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು. ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ನಾನು ಅದನ್ನು ಅವರಿಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆ ಗಳಲ್ಲಿ ಅವರ ಪಾಲನ್ನು ಅವರಿಗೆ ಕೊಟ್ಟಿದ್ದೇನೆ. ಅದು ಅತಿಕ್ರಮದ ಬಲಿಯ ಹಾಗೆಯೂ ಪಾಪದ ಬಲಿಯ ಹಾಗೆಯೂ ಅತಿ ಪರಿಶುದ್ಧವಾದದ್ದು.
- Exodus 12:19–20 ವಿಮೋಚನಕಾಂಡ 12:19–20ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು.
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- 1 Peter 4:2 1 ಪೇತ್ರನು 4:2ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.
- 1 Corinthians 5:6–8 1 ಕೊರಿಂಥದವರಿಗೆ 5:6–8ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ? ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.