Leviticus · chapter 2 · verse 9
Leviticus 2:9 in Kannada
ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
Aaga yaajakanu adarinda jnyaapakaarthavaada aahaara samarpane yannaagi tegedukondu adannu yajnyavediya mele sudabeku: adu benkiyinda maadi ddaagiddu kartanige suvaasaneya samarpaneyaagi ruvadu.
Leviticus 2:9 in English
- King James Version (KJV)
- And the priest shall take from the meat offering a memorial thereof, and shall burn [it] upon the altar: [it is] an offering made by fire, of a sweet savour unto the LORD.
- World English Bible (WEB)
- The priest shall take from the meal offering its memorial, and shall burn it on the altar, an offering made by fire, of a pleasant aroma to the LORD.
- American Standard Version (ASV)
- And the priest shall take up from the meal-offering the memorial thereof, and shall burn it upon the altar, an offering made by fire, of a sweet savor unto Jehovah.
- Bible in Basic English (BBE)
- And he is to take from the meal offering a part, for a sign, burning it on the altar; an offering made by fire for a sweet smell to the Lord.
- Darby Translation (DBY)
- And the priest shall take from the oblation a memorial thereof, and shall burn it on the altar, an offering by fire to Jehovah of a sweet odour.
- Webster's Bible (WBS)
- And the priest shall take from the meat-offering a memorial of it, and shall burn [it] upon the altar: [it is] an offering made by fire, of a sweet savor to the LORD.
- Young's Literal Translation (YLT)
- and the priest hath lifted up from the present its memorial, and hath made perfume on the altar, a fire-offering of sweet fragrance to Jehovah;
Read in context
- 7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.
- 8ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.
- 9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.
- 10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- 11ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು.
Cross references
- Leviticus 2:2 ಯಾಜಕಕಾಂಡ 2:2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Leviticus 6:15 ಯಾಜಕಕಾಂಡ 6:15ಅವನು ಆಹಾರ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಆಹಾರ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದು ಕೊಂಡು ಜ್ಞಾಪಕಾರ್ಥವಾಗಿ ಕರ್ತನಿಗೆ ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Psalm 22:13–14 ಕೀರ್ತನೆಗಳು 22:13–14ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.