Leviticus · chapter 20 · verse 19
Leviticus 20:19 in Kannada
ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
Idallade neenu ninna taayiya sahodariya illave tandeya sahodariya bettaletanavannu kaanuvante maada baaradu, kaanuvante maadidavanu tanna hattirada sambandhiya bettaletanavannu bayalu maadiddaane; avaru tamma aparaadhavannu hottukollabeku.
Leviticus 20:19 in English
- King James Version (KJV)
- And thou shalt not uncover the nakedness of thy mother’s sister, nor of thy father’s sister: for he uncovereth his near kin: they shall bear their iniquity.
- World English Bible (WEB)
- “‘You shall not uncover the nakedness of your mother’s sister, nor of your father’s sister, for he has made his close relative naked. They shall bear their iniquity.
- American Standard Version (ASV)
- And thou shalt not uncover the nakedness of thy mother’s sister, nor of thy father’s sister; for he hath made naked his near kin: they shall bear their iniquity.
- Bible in Basic English (BBE)
- And you may not have sex connection with your mother's sister or your father's sister, for they are his near relations: their sin will be on them.
- Darby Translation (DBY)
- And the nakedness of thy mother's sister, and of thy father's sister shalt thou not uncover; for he hath laid naked his near relation: they shall bear their iniquity.
- Webster's Bible (WBS)
- And thou shalt not uncover the nakedness of thy mother's sister, nor of thy father's sister: for he uncovereth his near kin: they shall bear their iniquity.
- Young's Literal Translation (YLT)
- 'And the nakedness of thy mother's sister, and of thy father's sister, thou dost not uncover; because his relation he hath made bare; their iniquity they bear.
Read in context
- 17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.
- 18ಒಬ್ಬನು ರೋಗದಲ್ಲಿರುವ ಒಬ್ಬ ಸ್ತ್ರೀಯೊಂದಿಗೆ ಮಲಗಿ ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಿದರೆ ಅವನು ಅವಳ ಬುಗ್ಗೆಯನ್ನು ಬಯಲುಪಡಿಸಿದ್ದಾನೆ; ಅವಳು ತನ್ನ ರಕ್ತದ ಬುಗ್ಗೆಯನ್ನು ಬಯಲುಪಡಿಸಿದ್ದಾಳೆ; ಆದದರಿಂದ ಅವರಿಬ್ಬರೂ ಅವರ ಜನರ ಮಧ್ಯದಿಂದ ತೆಗೆದುಹಾಕಲ್ಪಡಬೇಕು.
- 19ಇದಲ್ಲದೆ ನೀನು ನಿನ್ನ ತಾಯಿಯ ಸಹೋದರಿಯ ಇಲ್ಲವೆ ತಂದೆಯ ಸಹೋದರಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು, ಕಾಣುವಂತೆ ಮಾಡಿದವನು ತನ್ನ ಹತ್ತಿರದ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡಿದ್ದಾನೆ; ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು.
- 20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
- 21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
Cross references
- Leviticus 18:6 ಯಾಜಕಕಾಂಡ 18:6ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯ ಬೆತ್ತಲೆತನವನ್ನು ಬಯಲು ಮಾಡುವದಕ್ಕೆ ಅವಳ ಸವಿಾಪಕ್ಕೆ ಹೋಗಬಾರದು; ನಾನೇ ಕರ್ತನು.
- Leviticus 18:12–30 ಯಾಜಕಕಾಂಡ 18:12–30ನಿನ್ನ ತಂದೆಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಂದೆಗೆ ಹತ್ತಿರ ಸಂಬಂಧಿ ಯಾಗಿದ್ದಾಳೆ. ನಿನ್ನ ತಾಯಿಯ ಸಹೋದರಿಯ ಬೆತ್ತಲೆತನವನ್ನು ನೀನು ಕಾಣುವಂತೆ ಮಾಡಬಾರದು; ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿ ದ್ದಾಳೆ. ನೀನು ನಿನ್ನ ತಂದೆಯ ಸಹೋದರನ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ಅವನ ಹೆಂಡತಿಯ ಬಳಿಗೆ ಹೋಗಬಾರದು; ಅವಳು ನಿನಗೆ ದೊಡ್ಡ ತಾಯಿ (ಚಿಕ್ಕತಾಯಿ). ನಿನ್ನ ಸೊಸೆಯ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು; ಅವಳು ನಿನ್ನ ಮಗನ ಹೆಂಡತಿ; ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು. ನೀನು ನಿನ್ನ ಸಹೋ ದರನ ಹೆಂಡತಿಯ ಬೆತ್ತಲೆತನವನ್ನು ಕಾಣುವಂತೆ ಮಾಡ ಬಾರದು; ಅದು ನಿನ್ನ ಸಹೋದರನ ಬೆತ್ತಲೆತನ. ನೀನು ಒಬ್ಬ ಸ್ತ್ರೀಯ ಮತ್ತು ಅವಳ ಮಗಳ ಬೆತ್ತಲೆ ತನವನ್ನು ಕಾಣುವಂತೆ ಮಾಡಬಾರದು ಇಲ್ಲವೆ ಅವಳ ಮಗನ ಮಗಳ ಅಥವಾ ಮಗಳ ಮಗಳ ಬೆತ್ತಲೆತನ ವನ್ನು ಕಾಣುವಂತೆ ಮಾಡಬಾರದು. ಅವರು ಅವಳ ಹತ್ತಿರದ ಸಂಬಂಧಿಯಾಗಿದ್ದಾರೆ. ಅದು ದುಷ್ಟತನ ವಾಗಿದೆ. ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ. ಇದು ಮಾತ್ರವಲ್ಲದೆ ಒಬ್ಬಳು ತನ್ನ ಅಶುದ್ಧತ್ವದ ನಿಮಿತ್ತವಾಗಿ ಪ್ರತ್ಯೇಕಿಸಲ್ಪಟ್ಟಾಗ ನೀನು ಆ ಸ್ತ್ರೀಯ ಬೆತ್ತಲೆತನವನ್ನು ನೋಡುವಂತೆ ಅವಳ ಹತ್ತಿರ ಹೋಗ ಬೇಡ. ಇದಲ್ಲದೆ ಅವಳಿಂದ ನಿನ್ನನ್ನು ಹೊಲೆಮಾಡಿ ಕೊಳ್ಳದಂತೆ ನಿನ್ನ ನೆರೆಯವನ ಹೆಂಡತಿಯೊಂದಿಗೆ ನೀನು ಸಂಗಮಿಸಬೇಡ. ನಿನ್ನ ದೇವರ ಹೆಸರನ್ನು ಅಶುದ್ಧಪಡಿಸುವಂತೆ ನಿನ್ನ ಸಂತಾನವನ್ನು ಮೋಲೆಕನಿಗೆ ಬೆಂಕಿಯ ಮೂಲಕ ಅರ್ಪಿಸಬಾರದು; ನಾನೇ ಕರ್ತನು. ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು. ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಹೊಲೆಮಾಡಿಕೊಳ್ಳಬಾರದು; ಯಾವ ಸ್ತ್ರೀಯೂ ಅದರಿಂದ ಸಂಗಮಿಸಿಕೊಳ್ಳುವದಕ್ಕೆ ಪಶುವಿನ ಮುಂದೆ ನಿಲ್ಲಬಾರದು; ಅದು ಗಲಿಬಿಲಿಯಾದದ್ದು. ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಹೊಲೆ ಮಾಡಿಕೊಳ್ಳಬಾರದು. ನಿಮ್ಮ ಮುಂದೆ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಲ್ಲಿ ಹೊಲೆಯಾಗಿವೆ. ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು. ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.