Leviticus · chapter 20 · verse 22
Leviticus 20:22 in Kannada
ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
Aadadarinda neevu nanna ellaa niyamagalannoo nyaayagalannoo kaikondu avugalannu maadabeku; heegiddare neevu vaasisuvadakke naanu nimmannu taruva aa deshavu nimmannu kaaribiduvadilla.
Leviticus 20:22 in English
- King James Version (KJV)
- Ye shall therefore keep all my statutes, and all my judgments, and do them: that the land, whither I bring you to dwell therein, spue you not out.
- World English Bible (WEB)
- “‘You shall therefore keep all my statutes and all my ordinances, and do them, that the land where I am bringing you to dwell may not vomit you out.
- American Standard Version (ASV)
- Ye shall therefore keep all my statutes, and all mine ordinances, and do them; that the land, whither I bring you to dwell therein, vomit you not out.
- Bible in Basic English (BBE)
- So then, keep my rules and my decisions and do them, so that the land which I am giving you as your resting-place may not violently send you out again.
- Darby Translation (DBY)
- And ye shall observe all my statutes, and all mine ordinances, and do them, that the land whither I bring you to dwell therein vomit you not out.
- Webster's Bible (WBS)
- Ye shall therefore keep all my statutes, and all my judgments, and do them: that the land whither I bring you to dwell therein, may not vomit you out.
- Young's Literal Translation (YLT)
- 'And ye have kept all My statutes, and all My judgments, and have done them, and the land vomiteth you not out whither I am bringing you in to dwell in it;
Read in context
- 20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
- 21ಇದಲ್ಲದೆ ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ ಅದು ಅಶುದ್ಧ ವಾದದ್ದು; ಅವನು ತನ್ನ ಸಹೋದರನ ಬೆತ್ತಲೆ ತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ಮಕ್ಕಳಿ ಲ್ಲದವರಾಗುವರು.
- 22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
- 23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- 24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Leviticus 18:25–28 ಯಾಜಕಕಾಂಡ 18:25–28ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ
- Psalm 119:160 ಕೀರ್ತನೆಗಳು 119:160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- Leviticus 18:4–5 ಯಾಜಕಕಾಂಡ 18:4–5ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ. ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Psalm 119:145 ಕೀರ್ತನೆಗಳು 119:145ಪೂರ್ಣಹೃದಯದಿಂದ ನಾನು ಕೂಗಿದ್ದೇನೆ; ಓ ಕರ್ತನೇ, ನನಗೆ ಉತ್ತರಕೊಡು; ನಾನು ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
- Psalm 105:45 ಕೀರ್ತನೆಗಳು 105:45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Deuteronomy 4:45 ಧರ್ಮೋಪದೇಶಕಾಂಡ 4:45ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
- Leviticus 26:33 ಯಾಜಕಕಾಂಡ 26:33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Psalm 119:171 ಕೀರ್ತನೆಗಳು 119:171ನೀನು ನಿನ್ನ ನಿಯಮಗಳನ್ನು ನನಗೆ ಕಲಿಸಿದಾಗ ನನ್ನ ತುಟಿಗಳು ನಿನ್ನ ಸ್ತೋತ್ರವನ್ನು ನುಡಿಯುತ್ತವೆ.