Leviticus · chapter 20 · verse 5
Leviticus 20:5 in Kannada
ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
Aaga naanu aa manushyanigoo avana kutumbakkoo virodhavaa giyoo vimukhanaagiyoo iruvenu. Moleka nondige vyabhichaaramaadiddakkaagi avananoo vyabhichaaramaaduvadakke himbaalisuvavarellarannoo avara janara madhyadolaginda tegeduhaakuvenu.
Leviticus 20:5 in English
- King James Version (KJV)
- Then I will set my face against that man, and against his family, and will cut him off, and all that go a whoring after him, to commit whoredom with Molech, from among their people.
- World English Bible (WEB)
- then I will set my face against that man and against his family, and will cut him off, and all who play the prostitute after him to play the prostitute with Molech, from among their people.
- American Standard Version (ASV)
- then I will set my face against that man, and against his family, and will cut him off, and all that play the harlot after him, to play the harlot with Molech, from among their people.
- Bible in Basic English (BBE)
- Then my face will be turned against him and his family, and he and all those who do evil with him will be cut off from among their people.
- Darby Translation (DBY)
- then I will set my face against that man, and against his family, and will cut him off, and all that go a whoring after him, to commit whoredom with Molech, from among their people.
- Webster's Bible (WBS)
- Then I will set my face against that man, and against his family, and will cut him off, and all that go astray after him, to commit lewdness with Molech from among their people.
- Young's Literal Translation (YLT)
- then I have set My face against that man, and against his family, and have cut him off, and all who are going a-whoring after him, even going a-whoring after the Molech, from the midst of their people.
Read in context
- 3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- 4ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
- 5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 6ಮಂತ್ರವಾದಿಗಳ ಕಡೆಗೆ ತಿರುಗಿ ಕೊಳ್ಳುವವನಿಗೂ ವ್ಯಭಿಚಾರಮಾಡುವಂತೆ ಮಾಟಗಾರರನ್ನು ಹಿಂಬಾಲಿಸುವವನಿಗೂ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- 7ಆದದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಪರಿಶುದ್ಧರಾಗಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Psalm 106:39 ಕೀರ್ತನೆಗಳು 106:39ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Hosea 2:5 ಹೋಶೇಯ 2:5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
- Hosea 2:13 ಹೋಶೇಯ 2:13ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
- Jeremiah 32:39 ಯೆರೆಮೀಯ 32:39ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
- Leviticus 17:10 ಯಾಜಕಕಾಂಡ 17:10ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
- Jeremiah 32:28–35 ಯೆರೆಮೀಯ 32:28–35ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು. ಇಸ್ರಾ ಯೇಲಿನ ಮಕ್ಕಳೂ ಯೆಹೂದದ ಮಕ್ಕಳೂ ತಮ್ಮ ಯೌವನದಾರಭ್ಯ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದ್ದಾರೆ; ಇಸ್ರಾಯೇಲಿನ ಮಕ್ಕಳು ತಮ್ಮ ಕೈ ಕೆಲಸಗಳಿಂದ ನನಗೆ ಕೋಪೋದ್ರೇಕವನ್ನೇ ಎಬ್ಬಿಸಿದ್ದಾರೆ ಎಂದು ಕರ್ತನು ಅನ್ನುತ್ತಾನೆ. ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು. ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ. ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ. ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.