Leviticus · chapter 22 · verse 21
Leviticus 22:21 in Kannada
ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
Tanna pramaanavannu pooraisuva haage yaavanaadaroo samaadhaanada baligala yajnya samarpaneyannaagali pashugalannaagali kurigala nnaagali uchitavaada kaanikeyannu kartanige arpisuvadaadare adu angeekaarakke paripoorna vulladdaagirabeku; adarolage yaava doshavu irabaaradu.
Leviticus 22:21 in English
- King James Version (KJV)
- And whosoever offereth a sacrifice of peace offerings unto the LORD to accomplish [his] vow, or a freewill offering in beeves or sheep, it shall be perfect to be accepted; there shall be no blemish therein.
- World English Bible (WEB)
- Whoever offers a sacrifice of peace offerings to the LORD to accomplish a vow, or for a free will offering of the herd or of the flock, it shall be perfect to be accepted. It shall have no defect.
- American Standard Version (ASV)
- And whosoever offereth a sacrifice of peace-offerings unto Jehovah to accomplish a vow, or for a freewill-offering, of the herd or of the flock, it shall be perfect to be accepted; there shall be no blemish therein.
- Bible in Basic English (BBE)
- And whoever makes a peace-offering to the Lord, in payment of an oath or as a free offering, from the herd or the flock, if it is to be pleasing to the Lord, let it be free from any mark or damage.
- Darby Translation (DBY)
- And if any present a sacrifice of peace-offering to Jehovah to accomplish a vow, or a voluntary offering of oxen or small cattle, it shall be without blemish to be accepted: there shall be no defect therein.
- Webster's Bible (WBS)
- And whoever offereth a sacrifice of peace-offerings to the LORD to accomplish [his] vow, or a free-will-offering in beeves, or sheep, it shall be perfect to be accepted: there shall be in it no blemish.
- Young's Literal Translation (YLT)
- 'And when a man bringeth near a sacrifice of peace-offerings to Jehovah, to complete a vow, or for a willing-offering, of the herd or of the flock, it is perfect for a pleasing thing: no blemish is in it;
Read in context
- 19ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು;
- 20ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ.
- 21ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು.
- 22ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು.
- 23ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
Cross references
- Numbers 15:8 ಅರಣ್ಯಕಾಂಡ 15:8ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
- Numbers 15:3 ಅರಣ್ಯಕಾಂಡ 15:3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- Leviticus 3:6 ಯಾಜಕಕಾಂಡ 3:6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- Ecclesiastes 5:4–5 ಪ್ರಸಂಗಿ 5:4–5ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು. ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.
- Leviticus 3:1 ಯಾಜಕಕಾಂಡ 3:1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
- Deuteronomy 23:21–23 ಧರ್ಮೋಪದೇಶಕಾಂಡ 23:21–23ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು. ಆದರೆ ನೀನು ಪ್ರಮಾಣ ಮಾಡಿರದಿದ್ದರೆ ನಿನ್ನ ಮೇಲೆ ಪಾಪವಿರು ವದಿಲ್ಲ. ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
- Psalm 50:14 ಕೀರ್ತನೆಗಳು 50:14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
- Proverbs 7:14 ಜ್ಞಾನೋಕ್ತಿಗಳು 7:14ನಾಚಿಕೆಯಿಲ್ಲದೆ --ನನ್ನಲ್ಲಿ ಸಮಾಧಾನ ಅರ್ಪಣೆಗಳು ಇವೆ; ಈ ದಿವಸ ನನ್ನ ಪ್ರಮಾಣಗಳನ್ನು ನಾನು ಸಲ್ಲಿಸಿದ್ದೇನೆ.
- Leviticus 7:11–38 ಯಾಜಕಕಾಂಡ 7:11–38ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು. ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು. ಕರ್ತನು ಮೋಶೆಯೊಂದಿಗೆ ಮಾತನಾಡಿ-- ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು. ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು. ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು. ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ. ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ. ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ. ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು. ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- Genesis 28:20 ಆದಿಕಾಂಡ 28:20ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- Genesis 35:1–3 ಆದಿಕಾಂಡ 35:1–3ದೇವರು ಯಾಕೋಬನಿಗೆ--ಎದ್ದು ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು; ನೀನು ನಿನ್ನ ಸಹೋದರನಾದ ಏಸಾವನೆದುರಿನಿಂದ ಓಡಿ ಹೋಗುತ್ತಿದ್ದಾಗ ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟು ಅಂದನು. ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ--ನಿಮ್ಮ ಮಧ್ಯದಲ್ಲಿರುವ ಅನ್ಯದೇವ ರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ; ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ; ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
Original words (Hebrew)
- whosoever · H376אִישׁ ʼîysh
- offereth · H7126קָרַב qârab
- sacrifice · H2077זֶבַח zebach
- offerings · H8002שֶׁלֶם shelem
- accomplish · H6381פָּלָא pâlâʼ
- vow · H5088נֶדֶר neder
- offering · H5071נְדָבָה nᵉdâbâh
- beeves · H1241בָּקָר bâqâr
- sheep · H6629צֹאן tsôʼn
- perfect · H8549תָּמִים tâmîym
- accepted · H7522רָצוֹן râtsôwn
- blemish · H3971מאוּם mʼûwm