Leviticus · chapter 22 · verse 4
Leviticus 22:4 in Kannada
ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
Aaronana santatiyavaralli obbanu kushtharogi illave sraavavullavaniddare avanu shuddhanaaguva varege parishuddhavaadavugalannu tinnabaaradu. Henadinda ashuddhavaadaddannu muttidavanu illave tannolaginda veerya horatavanu
Leviticus 22:4 in English
- King James Version (KJV)
- What man soever of the seed of Aaron [is] a leper, or hath a running issue; he shall not eat of the holy things, until he be clean. And whoso toucheth any thing [that is] unclean [by] the dead, or a man whose seed goeth from him;
- World English Bible (WEB)
- “‘Whoever of the offspring of Aaron is a leper or has a discharge shall not eat of the holy things until he is clean. Whoever touches anything that is unclean by the dead, or a man who has a seminal emission,
- American Standard Version (ASV)
- What man soever of the seed of Aaron is a leper, or hath an issue; he shall not eat of the holy things, until he be clean. And whoso toucheth anything that is unclean by the dead, or a man whose seed goeth from him;
- Bible in Basic English (BBE)
- No man of the seed of Aaron who is a leper, or who has a flow from his body, may take of the holy food till he is clean. And any man touching anything which is unclean because of the dead, or any man whose seed goes from him;
- Darby Translation (DBY)
- Whatsoever man of the seed of Aaron is a leper, or hath a flux, he shall not eat of the holy things, until he is clean. And he that toucheth any one that is unclean by a dead person, or a man whose seed of copulation hath passed from him;
- Webster's Bible (WBS)
- Whatever man of the seed of Aaron [is] a leper, or hath a running issue; he shall not eat of the holy things, until he is clean. And whoever toucheth any thing [that is] unclean [by] the dead, or a man whose seed goeth from him;
- Young's Literal Translation (YLT)
- 'Any man of the seed of Aaron, and is leprous or hath an issue — of the holy things he doth not eat till that he is clean; and he who is coming against any uncleanness of a person, or a man whose seed of copulation goeth out from him,
Read in context
- 2ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು.
- 3ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
- 4ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
- 5ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು--
- 6ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
Cross references
- Leviticus 11:39 ಯಾಜಕಕಾಂಡ 11:39ನೀವು ತಿನ್ನುವ ಯಾವದಾದರೂ ಪಶುವು ಸತ್ತಿದ್ದರೆ ಅದರ ಶವವನ್ನು ಮುಟ್ಟಿದವನು ಸಂಜೆಯ ವರೆಗೆ ಅಶುದ್ಧನಾಗಿರುವನು.
- Leviticus 15:2–3 ಯಾಜಕಕಾಂಡ 15:2–3ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು. ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
- Leviticus 15:13–16 ಯಾಜಕಕಾಂಡ 15:13–16ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತೆಗೆದು ಕೊಂಡು ಸಭೆಯ ಗುಡಾರದ ಬಾಗಿಲ ಬಳಿ ಕರ್ತನ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು. ಆಗ ಯಾಜಕನು ಒಂದನ್ನು ಪಾಪಬಲಿ ಗಾಗಿ ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು; ಯಾಜಕನು ಅವನ ಸ್ರಾವಕ್ಕೋಸ್ಕರ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು. ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
- Leviticus 13:2–3 ಯಾಜಕಕಾಂಡ 13:2–3ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು. ಯಾಜಕನು ಶರೀರದ ಚರ್ಮದ ಮೇಲಿರುವ ವ್ಯಾಧಿಯನ್ನು ನೋಡ ಬೇಕು; ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ ಆ ವ್ಯಾಧಿಯು ಅವನ ಶರೀರದ ಚರ್ಮಕ್ಕಿಂತಲೂ ಆಳ ವಾಗಿ ಕಂಡರೆ ಆ ವ್ಯಾಧಿಯು ಕುಷ್ಠವಾಗಿರುವದು; ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.
- Leviticus 11:24–28 ಯಾಜಕಕಾಂಡ 11:24–28ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು. ಗೊರಸು ಸೀಳದೆಯೂ ನಖವು ಇಗ್ಗೊರಸಾಗಿರ ದೆಯೂ ಮೆಲಕು ಹಾಕದೆಯೂ ಇರುವ ಪ್ರತಿಯೊಂದು ಮೃಗದ ಶವವು ನಿಮಗೆ ಅಶುದ್ಧವಾಗಿರುವದು. ಅದನ್ನು ಮುಟ್ಟಿದ ಪ್ರತಿಯೊಬ್ಬನೂ ಅಶುದ್ಧನಾಗಿರುವನು. ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು. ಅವುಗಳ ಶವವನ್ನು ಹೊರುವವನು ತನ್ನ ಬಟ್ಟೆಗಳನ್ನು ಒಗೆದು ಕೊಳ್ಳಬೇಕು. ಅವನು ಸಾಯಂಕಾಲದ ವರೆಗೂ ಅಶುದ್ಧ ನಾಗಿರುವನು; ಅವು ನಿಮಗೆ ಅಶುದ್ಧವಾದವುಗಳು.
- Numbers 18:9 ಅರಣ್ಯಕಾಂಡ 18:9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- Leviticus 2:10 ಯಾಜಕಕಾಂಡ 2:10ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು.
- Leviticus 21:1 ಯಾಜಕಕಾಂಡ 21:1ತರುವಾಯ ಕರ್ತನು ಮೋಶೆಗೆ ಹೇಳಿದ್ದೇನಂದರೆ--ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಸತ್ತವರ ನಿಮಿತ್ತವಾಗಿ ಅವನ ಜನರಲ್ಲಿ ಯಾವನೂ ಹೊಲೆಯಾಗಬಾರದು.
- Numbers 18:19 ಅರಣ್ಯಕಾಂಡ 18:19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- Leviticus 14:1–32 ಯಾಜಕಕಾಂಡ 14:1–32ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು. ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು; ಇಗೋ, ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು. ಶುದ್ಧವಾಗುವದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಂಡು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು; ತರುವಾಯ ಅವನು ಪಾಳೆಯ ದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳ ವರೆಗೆ ಕಾಯಬೇಕು. ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು. ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧ ಪಡಿಸಿಕೊಳ್ಳುವವನನ್ನೂ ಆ ವಸ್ತುಗಳನ್ನೂ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಕರ್ತನ ಮುಂದೆ ನಿಲ್ಲಿಸಬೇಕು. ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಂಡು ಅಪರಾಧ ಬಲಿಗಾಗಿ ಸಮರ್ಪಿಸಿ ಅವುಗಳನ್ನು ಆಡಿಸುವ ಸಮರ್ಪಣೆಗಾಗಿ ಕರ್ತನ ಎದುರಿನಲ್ಲಿ ಆಡಿಸಬೇಕು. ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು. ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು. ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು. ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು. ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು. ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು. ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು. ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು. ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು. ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು. ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು. ಮತ್ತು ಯಾಜಕನು ತನ್ನ ಎಡ ಅಂಗೈಯಲ್ಲಿ ಎಣ್ಣೆಯನ್ನು ಹೊಯಿದುಕೊಂಡು ತನ್ನ ಬಲಗೈ ಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸಬೇಕು. ಮತ್ತು ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರ ಳಿಗೂ ಅಪರಾಧಬಲಿಯ ರಕ್ತವನ್ನು ಹಚ್ಚಿದ ಸ್ಥಳದ ಮೇಲೆಯೂ ಹಚ್ಚಬೇಕು. ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದು ಬೆಳವವನ್ನಾಗಲಿ ಪಾರಿವಾಳದ ಮರಿಯ ನ್ನಾಗಲಿ ಸಮರ್ಪಿಸಬೇಕು. ಅದರಂತೆಯೇ ಅವನು ತನ್ನಿಂದಾಗುವಷ್ಟು ಮೇರೆಗೆ ಒಂದನ್ನು ಪಾಪಬಲಿಗಾಗಿ ಇನ್ನೊಂದನ್ನು ದಹನಬಲಿಗಾಗಿ ಆಹಾರ ಸಮರ್ಪಣೆ ಯೊಂದಿಗೆ ಸಮರ್ಪಿಸಬೇಕು; ಶುದ್ಧಪಡಿಸಿಕೊಳ್ಳುವವ ನಿಗೋಸ್ಕರ ಯಾಜಕನು ಕರ್ತನ ಎದುರಿನಲ್ಲಿ ಪ್ರಾಯ ಶ್ಚಿತ್ತವನ್ನುಮಾಡಬೇಕು. ಕುಷ್ಠರೋಗವುಳ್ಳವನಿಗಾಗಿ ಶುದ್ಧತೆಮಾಡಿಸಿಕೊಳ್ಳುವದರಲ್ಲಿ ಕೈಯಿಂದ ಆಗದಿರುವ ವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
- Leviticus 6:25–29 ಯಾಜಕಕಾಂಡ 6:25–29ಆರೋನನಿಗೂ ಅವನ ಕುಮಾರರಿಗೂ ಹೇಳಬೇಕಾ ದದ್ದೇನಂದರೆ, ಪಾಪದ ಬಲಿಯ ನಿಯಮವು ಇದೇ. ದಹನಬಲಿಯು ವಧಿಸಲ್ಪಡುವ ಸ್ಥಳದಲ್ಲಿ ಪಾಪದ ಬಲಿಯೂ ಕರ್ತನ ಸನ್ನಿಧಿಯಲ್ಲಿ ವಧಿಸಲ್ಪಡ ಬೇಕು; ಅದು ಅತಿ ಪರಿಶುದ್ಧವಾದದ್ದು. ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು. ಯಾವನಾದರೂ ಅದರ ಮಾಂಸವನ್ನು ಮುಟ್ಟಿದರೆ ಅದು ಪರಿಶುದ್ಧವಾಗುವದು; ಯಾವದಾ ದರೂ ಉಡುಪಿನ ಮೇಲೆ ಅದರ ರಕ್ತವು ಚಿಮುಕಿಸ ಲ್ಪಟ್ಟಾಗ ನೀನು ಅದನ್ನು ಚಿಮುಕಿಸದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು. ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು. ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
Original words (Hebrew)
- soever · H376אִישׁ ʼîysh
- seed · H2233זֶרַע zeraʻ
- Aaron · H175אַהֲרוֹן ʼAhărôwn
- leper · H6879צָרַע tsâraʻ
- issue · H2100זוּב zûwb
- eat · H398אָכַל ʼâkal
- things · H6944קֹדֶשׁ qôdesh
- clean · H2891טָהֵר ṭâhêr
- toucheth · H5060נָגַע nâgaʻ
- unclean · H2931טָמֵא ṭâmêʼ
- dead · H5315נֶפֶשׁ nephesh
- man · H376אִישׁ ʼîysh
- seed · H2233זֶרַע zeraʻ
- goeth · H3318יָצָא yâtsâʼ