Leviticus · chapter 23 · verse 36
Leviticus 23:36 in Kannada
ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Elu divasa neevu benkiyinda maadida samarpanegalannu kartanige arpisabeku. Entaneya divasavu nimage pari shuddha kootavaagiruvadu; neevu benkiyinda maadida samarpaneyannu kartanige arpisabeku; adondu gambheera sabheyaagiruvadu; adaralli neevu kashtakaravaada kelasavannu maadabaaradu.
Leviticus 23:36 in English
- King James Version (KJV)
- Seven days ye shall offer an offering made by fire unto the LORD: on the eighth day shall be an holy convocation unto you; and ye shall offer an offering made by fire unto the LORD: it [is] a solemn assembly; [and] ye shall do no servile work [therein].
- World English Bible (WEB)
- Seven days you shall offer an offering made by fire to the LORD. On the eighth day shall be a holy convocation to you. You shall offer an offering made by fire to the LORD. It is a solemn assembly; you shall do no regular work.
- American Standard Version (ASV)
- Seven days ye shall offer an offering made by fire unto Jehovah: on the eighth day shall be a holy convocation unto you; and ye shall offer an offering made by fire unto Jehovah: it is a solemn assembly; ye shall do no servile work.
- Bible in Basic English (BBE)
- Every day for seven days give an offering made by fire to the Lord; and on the eighth day there is to be a holy meeting, when you are to give an offering made by fire to the Lord; this is a special holy day: you may do no field-work on that day.
- Darby Translation (DBY)
- Seven days ye shall present an offering by fire to Jehovah; on the eighth day shall be a holy convocation unto you; and ye shall present an offering by fire to Jehovah: it is a solemn assembly; no manner of servile work shall ye do.
- Webster's Bible (WBS)
- Seven days ye shall offer an offering made by fire to the LORD: on the eighth day shall be a holy convocation to you, and ye shall offer an offering made by fire to the LORD: it [is] a solemn assembly; [and] ye shall do no servile work [in it] .
- Young's Literal Translation (YLT)
- seven days ye bring near a fire-offering to Jehovah, on the eighth day ye have a holy convocation, and ye have brought near a fire-offering to Jehovah; it [is] a restraint, ye do no servile work.
Read in context
- 34ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು.
- 35ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು.
- 36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
- 38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ
Cross references
- Nehemiah 8:18 ನೆಹೆಮೀಯ 8:18ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
- Numbers 29:12–38 ಅರಣ್ಯಕಾಂಡ 29:12–38ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 2 Chronicles 7:8–11 2 ಪೂರ್ವಕಾಲವೃತ್ತಾಂತ 7:8–11ಅದೇ ಕಾಲ ದಲ್ಲಿ ಸೊಲೊಮೋನನು ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತ ನದಿಯ ವರೆಗೆ ಇರುವ ಮಹಾ ಸಭೆಯಾದ ಸಮಸ್ತ ಇಸ್ರಾಯೇಲ್ಯರು ಏಳು ದಿವಸ ಹಬ್ಬವನ್ನು ಮಾಡಿದರು. ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು; ಏಳನೇ ತಿಂಗಳಿನ ಇಪ್ಪತ್ತ ಮೂರನೇ ದಿವಸದಲ್ಲಿ ಅವನು ಜನರನ್ನು ತಮ್ಮ ಡೇರೆ ಗಳಿಗೆ ಕಳುಹಿಸಿಬಿಟ್ಟನು. ಕರ್ತನು ದಾವೀದನಿಗೂ ಸೊಲೊಮೋನನಿಗೂ ತನ್ನ ಜನವಾದ ಇಸ್ರಾಯೇ ಲಿಗೂ ಮಾಡಿದ ಉಪಕಾರಕ್ಕೋಸ್ಕರ ಅವರು ಹೃದಯ ದಲ್ಲಿ ಆನಂದವಾಗಿ ಸಂತೋಷಪಡುತ್ತಾ ಹೋದರು. ಹೀಗೆಯೇ ಸೊಲೊಮೋನನು ಕರ್ತನ ಆಲಯ ವನ್ನೂ ಅರಸನ ಮನೆಯನ್ನೂ ಕಟ್ಟಿಸಿ ಮುಗಿಸಿದನು. ಕರ್ತನ ಆಲಯದಲ್ಲಿಯೂ ತನ್ನ ಮನೆಯಲ್ಲಿಯೂ ಮಾಡಲು ಸೊಲೊಮೋನನ ಹೃದಯದಲ್ಲಿ ಬಂದ ದ್ದನ್ನೆಲ್ಲಾ ಅವನು ಸಫಲವಾಗುವಂತೆ ಸಾಧಿಸಿದನು.
- Deuteronomy 16:8 ಧರ್ಮೋಪದೇಶಕಾಂಡ 16:8ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Joel 2:15 ಯೋವೇಲ 2:15ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ.
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
Original words (Hebrew)
- Seven · H7651שֶׁבַע shebaʻ
- days · H3117יוֹם yôwm
- offer · H7126קָרַב qârab
- fire · H801אִשָּׁה ʼishshâh
- eighth · H8066שְׁמִינִי shᵉmîynîy
- day · H3117יוֹם yôwm
- holy · H6944קֹדֶשׁ qôdesh
- convocation · H4744מִקְרָא miqrâʼ
- offer · H7126קָרַב qârab
- fire · H801אִשָּׁה ʼishshâh
- assembly · H6116עֲצָרָה ʻătsârâh
- do · H6213עָשָׂה ʻâsâh
- servile · H5656עֲבֹדָה ʻăbôdâh
- work · H4399מְלָאכָה mᵉlâʼkâh