Leviticus · chapter 23 · verse 5
Leviticus 23:5 in Kannada
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
Modalaneya tingalina hadinaalkaneya diva sada saayankaaladalli kartana paskavu.
Leviticus 23:5 in English
- King James Version (KJV)
- In the fourteenth [day] of the first month at even [is] the LORD’s passover.
- World English Bible (WEB)
- In the first month, on the fourteenth day of the month in the evening, is the LORD’s Passover.
- American Standard Version (ASV)
- In the first month, on the fourteenth day of the month at even, is Jehovah’s passover.
- Bible in Basic English (BBE)
- In the first month, on the fourteenth day of the month at nightfall, is the Lord's Passover;
- Darby Translation (DBY)
- In the first month, on the fourteenth of the month, between the two evenings, is the passover to Jehovah.
- Webster's Bible (WBS)
- In the fourteenth [day] of the first month at evening [is] the LORD'S passover.
- Young's Literal Translation (YLT)
- in the first month, on the fourteenth of the month, between the evenings, [is] the passover to Jehovah;
Read in context
- 3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- 4ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ.
- 5ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು.
- 6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
- 7ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.
Cross references
- Deuteronomy 16:1–8 ಧರ್ಮೋಪದೇಶಕಾಂಡ 16:1–8ಆಬೀಬ್ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು; ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು. ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Joshua 5:10 ಯೆಹೋಶುವ 5:10ಇಸ್ರಾಯೇಲ್ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
- Exodus 12:2–14 ವಿಮೋಚನಕಾಂಡ 12:2–14ಈ ತಿಂಗಳೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರುವದು. ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇ ನಂದರೆ--ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಒಂದೊಂದು ಕುರಿಮರಿಯನ್ನು ಅವರ ತಂದೆಗಳ ಮನೆಯ ಪ್ರಕಾರ ಮನೆಗೆ ಒಂದು ಕುರಿಮರಿಯನ್ನು ತಕ್ಕೊಳ್ಳಬೇಕು. ಒಂದು ಕುರಿಮರಿಯನ್ನು ತಿನ್ನುವದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ ಅವನೂ ತನ್ನ ಮನೆಗೆ ಸವಿಾಪವಾಗಿರುವ ತನ್ನ ನೆರೆಯವನೂ ವ್ಯಕ್ತಿಗಳ ಲೆಕ್ಕದ ಪ್ರಕಾರ ಒಂದನ್ನು ತಕ್ಕೊಳ್ಳಲಿ; ಒಬ್ಬೊಬ್ಬನು ತಾನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತಕ್ಕೊಳ್ಳಲಿ. ನಿಮ್ಮ ಕುರಿಮರಿಯು ನಿರ್ದೋಷವಾಗಿರುವ ಒಂದು ವರುಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಮೇಕೆಗಳಿಂದಾಗಲಿ ಅದನ್ನು ತಕ್ಕೊ ಳ್ಳಬೇಕು. ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Exodus 13:3–10 ವಿಮೋಚನಕಾಂಡ 13:3–10ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು. ಅಬೀಬ್ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ. ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು. ಹುಳಿಯಿಲ್ಲದ ರೊಟ್ಟಿಯನ್ನು ಆ ಏಳು ದಿನಗಳಲ್ಲಿ ತಿನ್ನಬೇಕು, ನಿನ್ನ ಬಳಿಯಲ್ಲಿ ಹುಳಿ ರೊಟ್ಟಿಯು ಕಾಣಿಸಬಾರದು. ಇಲ್ಲವೆ ಹುಳಿ ಹಿಟ್ಟು ನಿನ್ನ ಯಾವ ಮೇರೆಯಲ್ಲೂ ಕಾಣಬಾರದು. ಆ ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ. ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ. ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
- Exodus 12:18–19 ವಿಮೋಚನಕಾಂಡ 12:18–19ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು.
- Numbers 28:16–17 ಅರಣ್ಯಕಾಂಡ 28:16–17ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
- Matthew 26:17 ಮತ್ತಾಯನು 26:17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
- 2 Chronicles 35:18–19 2 ಪೂರ್ವಕಾಲವೃತ್ತಾಂತ 35:18–19ಪ್ರವಾದಿಯಾದ ಸಮುವೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿದ್ದಿಲ್ಲ. ಇಸ್ರಾಯೇಲಿನ ಸಮಸ್ತ ಅರಸುಗಳಲ್ಲಿ ಯೋಷೀಯನೂ ಯಾಜಕರೂ ಲೇವಿಯರೂ ಸಿದ್ಧವಾಗಿದ್ದ ಯೆಹೂದ ಇಸ್ರಾಯೇಲ್ಯ ರೆಲ್ಲರೂ ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ. ಯೋಷೀ ಯನ ಆಳಿಕೆಯ ಹದಿನೆಂಟನೇ ವರುಷದಲ್ಲಿ ಈ ಪಸ್ಕವು ಆಚರಿಸಲ್ಪಟ್ಟಿತು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Luke 22:7 ಲೂಕನು 22:7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
- Mark 14:12 ಮಾರ್ಕನು 14:12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.