Leviticus · chapter 25 · verse 14
Leviticus 25:14 in Kannada
ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
Nereyavanige enaadaroo maaraatamaadiddare illave nereyava ninda kondu kondiddare obbarigobbaru upadra padisikollabaaradu.
Leviticus 25:14 in English
- King James Version (KJV)
- And if thou sell ought unto thy neighbour, or buyest [ought] of thy neighbour’s hand, ye shall not oppress one another:
- World English Bible (WEB)
- “‘If you sell anything to your neighbor, or buy from your neighbor, you shall not wrong one another.
- American Standard Version (ASV)
- And if thou sell aught unto thy neighbor, or buy of thy neighbor’s hand, ye shall not wrong one another.
- Bible in Basic English (BBE)
- And in the business of trading goods for money, do no wrong to one another.
- Darby Translation (DBY)
- And if ye sell ought unto your neighbour, or buy of your neighbour's hand, ye shall not overreach one another.
- Webster's Bible (WBS)
- And if thou shalt sell aught to thy neighbor, or buy [aught] of thy neighbor's hand, ye shall not oppress one another:
- Young's Literal Translation (YLT)
- 'And when thou sellest anything to thy fellow, or buyest from the hand of thy fellow, ye do not oppress one another;
Read in context
- 12ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
- 13ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- 14ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
- 15ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
- 16ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
Cross references
- Leviticus 19:13 ಯಾಜಕಕಾಂಡ 19:13ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.
- Leviticus 25:17 ಯಾಜಕಕಾಂಡ 25:17ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- Micah 6:10–12 ಮೀಕ 6:10–12ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ? ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ? ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
- Isaiah 58:6 ಯೆಶಾಯ 58:6ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- Amos 8:4–7 ಆಮೋಸ 8:4–7ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ? ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
- Micah 2:2–3 ಮೀಕ 2:2–3ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ. ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
- James 5:1–5 ಯಾಕೋಬನು 5:1–5ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- 1 Samuel 12:3–4 1 ಸಮುವೇಲನು 12:3–4ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು. ಅವರು--ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ; ನೀನು ಯಾವನ ಕೈಯಿಂದ ಏನಾದರೂ ತಕ್ಕೊಳ್ಳಲಿಲ್ಲ ಅಂದರು.
- Amos 5:11–12 ಆಮೋಸ 5:11–12ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Ezekiel 22:12–13 ಯೆಹೆಜ್ಕೇಲನು 22:12–13ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Proverbs 28:16 ಜ್ಞಾನೋಕ್ತಿಗಳು 28:16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.