Leviticus · chapter 25 · verse 17
Leviticus 25:17 in Kannada
ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
Aadadarinda neevu obbarigobbaru upadrapadisikollabaaradu; devarige neenu bhaya padabeku. Nimma devaraagiruva kartanu naane.
Leviticus 25:17 in English
- King James Version (KJV)
- Ye shall not therefore oppress one another; but thou shalt fear thy God: for I [am] the LORD your God.
- World English Bible (WEB)
- You shall not wrong one another, but you shall fear your God; for I am the LORD your God.
- American Standard Version (ASV)
- And ye shall not wrong one another; but thou shalt fear thy God: for I am Jehovah your God.
- Bible in Basic English (BBE)
- And do no wrong, one to another, but let the fear of your God be before you; for I am the Lord your God.
- Darby Translation (DBY)
- And ye shall not oppress one another; but thou shalt fear thy God; for I am Jehovah your God.
- Webster's Bible (WBS)
- Ye shall not therefore oppress one another; but thou shalt fear thy God: for I [am] the LORD your God.
- Young's Literal Translation (YLT)
- and ye do not oppress one another, and thou hast been afraid of thy God; for I [am] Jehovah your God.
Read in context
- 15ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.
- 16ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
- 17ಆದದರಿಂದ ನೀವು ಒಬ್ಬರಿಗೊಬ್ಬರು ಉಪದ್ರಪಡಿಸಿಕೊಳ್ಳಬಾರದು; ದೇವರಿಗೆ ನೀನು ಭಯ ಪಡಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 18ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ.
- 19ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
Cross references
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Leviticus 19:14 ಯಾಜಕಕಾಂಡ 19:14ಕಿವುಡನನ್ನು ಶಪಿಸಬಾರದು; ಕುರು ಡನು ಮುಗ್ಗರಿಸುವಂತೆ ಅವನ ಮುಂದೆ ಕಲ್ಲನ್ನು ಇಡ ಬಾರದು, ಆದರೆ ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Leviticus 25:43 ಯಾಜಕಕಾಂಡ 25:43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
- Exodus 20:20 ವಿಮೋಚನಕಾಂಡ 20:20ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
- Leviticus 25:14 ಯಾಜಕಕಾಂಡ 25:14ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
- Genesis 42:18 ಆದಿಕಾಂಡ 42:18ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Deuteronomy 25:18 ಧರ್ಮೋಪದೇಶಕಾಂಡ 25:18ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Jeremiah 22:16 ಯೆರೆಮೀಯ 22:16ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Genesis 22:12 ಆದಿಕಾಂಡ 22:12ಆಗ ಅವನು --ಹುಡಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ. ನೀನು ದೇವರಿಗೆ ಭಯ ಪಡುತ್ತೀಯೆಂದು ಈಗ ನಾನು ತಿಳಿದಿದ್ದೇನೆ. ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವದಕ್ಕೆ ಹಿಂತೆಗೆಯಲಿಲ್ಲ ಅಂದನು.
- 1 Thessalonians 4:6 1 ಥೆಸಲೊನೀಕದವರಿಗೆ 4:6ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.