Leviticus · chapter 26 · verse 14
Leviticus 26:14 in Kannada
ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
Neevu nanna maatannu kelade ee ellaa aajnyegala prakaara nadeyade hodare
Leviticus 26:14 in English
- King James Version (KJV)
- But if ye will not hearken unto me, and will not do all these commandments;
- World English Bible (WEB)
- “‘But if you will not listen to me, and will not do all these commandments,
- American Standard Version (ASV)
- But if ye will not hearken unto me, and will not do all these commandments;
- Bible in Basic English (BBE)
- But if you do not give ear to me, and do not keep all these my laws;
- Darby Translation (DBY)
- But if ye hearken not unto me, and do not all these commandments,
- Webster's Bible (WBS)
- But if ye will not hearken to me, and will not do all these commandments;
- Young's Literal Translation (YLT)
- 'And if ye do not hearken to Me, and do not all these commands;
Read in context
- 12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
- 13ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- 14ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
- 15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
- 16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
Cross references
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Lamentations 2:17 ಪ್ರಲಾಪಗಳು 2:17ಕರ್ತನು ತಾನು ಸಂಕಲ್ಪಿಸಿದ್ದನ್ನು ಮಾಡಿದ್ದಾನೆ; ಆತನು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತನ್ನ ವಾಕ್ಯವನ್ನು ಪೂರೈಸಿದ್ದಾನೆ. ಆತನು ಕೆಡವಿ ಕನಿಕರಿಸಲಿಲ್ಲ; ಆತನು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿ ಅವನ ಕೊಂಬನ್ನು ಎತ್ತಿದ್ದಾನೆ.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
- Acts 3:23 ಅಪೊಸ್ತಲರ ಕೃತ್ಯಗಳು 3:23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.