Leviticus · chapter 26 · verse 31
Leviticus 26:31 in Kannada
ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
Nimma pattanagalannu kedavihaaki, nimma parishuddha sthalagalannu haalumaadi, nimma suvaasane galannu moosi nodade iruvenu.
Leviticus 26:31 in English
- King James Version (KJV)
- And I will make your cities waste, and bring your sanctuaries unto desolation, and I will not smell the savour of your sweet odours.
- World English Bible (WEB)
- I will lay your cities waste, and will bring your sanctuaries to desolation. I will not take delight in the sweet fragrance of your offerings.
- American Standard Version (ASV)
- And I will make your cities a waste, and will bring your sanctuaries unto desolation, and I will not smell the savor of your sweet odors.
- Bible in Basic English (BBE)
- And I will make your towns waste and send destruction on your holy places; I will take no pleasure in the smell of your sweet perfumes;
- Darby Translation (DBY)
- And I will lay waste your cities and desolate your sanctuaries; and I will not smell your sweet odours.
- Webster's Bible (WBS)
- And I will make your cities waste, and bring your sanctuaries to desolation, and I will not smell the savor of your sweet odors.
- Young's Literal Translation (YLT)
- and I have made your cities a waste, and have made desolate your sanctuaries, and I smell not at your sweet fragrances;
Read in context
- 29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- 30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- 31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- 32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
- 33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
Cross references
- Nehemiah 2:3 ನೆಹೆಮೀಯ 2:3ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Hebrews 10:26 ಇಬ್ರಿಯರಿಗೆ 10:26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- 2 Kings 25:4–10 2 ಅರಸುಗಳು 25:4–10ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು.
- Isaiah 1:11–14 ಯೆಶಾಯ 1:11–14ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Psalm 74:3–8 ಕೀರ್ತನೆಗಳು 74:3–8ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Ezekiel 9:6 ಯೆಹೆಜ್ಕೇಲನು 9:6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Amos 5:21–23 ಆಮೋಸ 5:21–23ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ. ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- 2 Chronicles 36:19 2 ಪೂರ್ವಕಾಲವೃತ್ತಾಂತ 36:19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.