Leviticus · chapter 26 · verse 32
Leviticus 26:32 in Kannada
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
Naanu deshavannu haalumaaduvenu; adaralli vaasa vaaguva nimma shatrugalu adakke aashcharyapaduvaru.
Leviticus 26:32 in English
- King James Version (KJV)
- And I will bring the land into desolation: and your enemies which dwell therein shall be astonished at it.
- World English Bible (WEB)
- I will bring the land into desolation, and your enemies who dwell in it will be astonished at it.
- American Standard Version (ASV)
- And I will bring the land into desolation; and your enemies that dwell therein shall be astonished at it.
- Bible in Basic English (BBE)
- And I will make your land a waste, a wonder to your haters living in it.
- Darby Translation (DBY)
- And I will bring the land into desolation; that your enemies who dwell there in may be astonished at it.
- Webster's Bible (WBS)
- And I will bring the land into desolation: and your enemies who dwell in it shall be astonished at it.
- Young's Literal Translation (YLT)
- and I have made desolate the land, and your enemies, who are dwelling in it, have been astonished at it.
Read in context
- 30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- 31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- 32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
- 33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- 34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
Cross references
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Jeremiah 25:11 ಯೆರೆಮೀಯ 25:11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.
- Jeremiah 19:8 ಯೆರೆಮೀಯ 19:8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
- Jeremiah 18:16 ಯೆರೆಮೀಯ 18:16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.
- Jeremiah 25:18 ಯೆರೆಮೀಯ 25:18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.
- 1 Kings 9:8 1 ಅರಸುಗಳು 9:8ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Isaiah 64:10 ಯೆಶಾಯ 64:10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- Lamentations 5:18 ಪ್ರಲಾಪಗಳು 5:18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
- Jeremiah 44:2 ಯೆರೆಮೀಯ 44:2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.