Leviticus · chapter 26 · verse 33
Leviticus 26:33 in Kannada
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
Nimmannu janaangagalalli chadarisi nimma hinde kattiyannu beesuvenu; nimma bhoomi haalaagi ruvadu; nimma pattanagalu naashavaagiruvavu.
Leviticus 26:33 in English
- King James Version (KJV)
- And I will scatter you among the heathen, and will draw out a sword after you: and your land shall be desolate, and your cities waste.
- World English Bible (WEB)
- I will scatter you among the nations, and I will draw out the sword after you. Your land will be a desolation, and your cities shall be a waste.
- American Standard Version (ASV)
- And you will I scatter among the nations, and I will draw out the sword after you: and your land shall be a desolation, and your cities shall be a waste.
- Bible in Basic English (BBE)
- And I will send you out in all directions among the nations, and my sword will be uncovered against you, and your land will be without any living thing, and your towns will be made waste.
- Darby Translation (DBY)
- And I will scatter you among the nations, and will draw out the sword after you; and your land shall be desolation, and your cities waste.
- Webster's Bible (WBS)
- And I will scatter you among the heathen, and will draw out a sword after you: and your land shall be desolate, and your cities waste.
- Young's Literal Translation (YLT)
- And you I scatter among nations, and have drawn out after you a sword, and your land hath been a desolation, and your cities are a waste.
Read in context
- 31ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು.
- 32ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
- 33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- 34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
- 35ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
Cross references
- Ezekiel 20:23 ಯೆಹೆಜ್ಕೇಲನು 20:23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Zechariah 7:14 ಜೆಕರ್ಯ 7:14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Deuteronomy 28:64–66 ಧರ್ಮೋಪದೇಶಕಾಂಡ 28:64–66ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.
- Ezekiel 22:15 ಯೆಹೆಜ್ಕೇಲನು 22:15ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
- Psalm 44:11 ಕೀರ್ತನೆಗಳು 44:11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
- Jeremiah 9:16 ಯೆರೆಮೀಯ 9:16ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
- Lamentations 4:15 ಪ್ರಲಾಪಗಳು 4:15ಅವರು ಜನರಿಗೆ--ನೀವು ಸರಿಯಿರಿ ಇದು ಅಶುದ್ಧವಾಗಿದೆ; ಸರಿಯಿರಿ, ಸರಿಯಿರಿ; ಮುಟ್ಟಬೇಡಿರಿ ಎಂದು ಕೂಗಿ ಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರು ವಾಗ--ಅವರು ಇನ್ನು ಮೇಲೆ ಅಲ್ಲಿ ವಾಸಮಾಡು ವದಿಲ್ಲ ಎಂದು ಅನ್ಯ ಜನಾಂಗಗಳೊಳಗೆ ಹೇಳಿದರು.
- Ezekiel 12:14–16 ಯೆಹೆಜ್ಕೇಲನು 12:14–16ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಚದರಿಸುವಾಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು. ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Lamentations 1:3 ಪ್ರಲಾಪಗಳು 1:3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.