Leviticus · chapter 26 · verse 37
Leviticus 26:37 in Kannada
ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
Odisuvava nillade obbara melobbaru kattiya bhayadindaada haage beeluvaru; nimma shatrugaligeduraagi nintukolluvadu nimmindaagadu.
Leviticus 26:37 in English
- King James Version (KJV)
- And they shall fall one upon another, as it were before a sword, when none pursueth: and ye shall have no power to stand before your enemies.
- World English Bible (WEB)
- They will stumble over one another, as it were before the sword, when no one pursues. You will have no power to stand before your enemies.
- American Standard Version (ASV)
- And they shall stumble one upon another, as it were before the sword, when none pursueth: and ye shall have no power to stand before your enemies.
- Bible in Basic English (BBE)
- Falling on one another, as before the sword, when no one comes after them; you will give way before your haters.
- Darby Translation (DBY)
- and they shall stumble one over another, as it were before a sword, when none pursueth; and ye shall have no power to stand before your enemies.
- Webster's Bible (WBS)
- And they shall fall one upon another, as it were before a sword, when none pursueth: and ye shall have no power to stand before your enemies.
- Young's Literal Translation (YLT)
- And they have stumbled one on another, as from the face of a sword, and there is none pursuing, and ye have no standing before your enemies,
Read in context
- 35ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- 36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- 37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- 38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- 39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
Cross references
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Joshua 7:12–13 ಯೆಹೋಶುವ 7:12–13ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- 1 Samuel 14:15–16 1 ಸಮುವೇಲನು 14:15–16ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Isaiah 10:4 ಯೆಶಾಯ 10:4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Numbers 14:42 ಅರಣ್ಯಕಾಂಡ 14:42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.