Leviticus · chapter 26 · verse 39
Leviticus 26:39 in Kannada
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
Nimmalli ulidavaru tamma akramadinda nimma shatrugala deshadalli ksheenavaaguvaru; tamma pitrugala akramagalinda avara sangada ksheenavaaguvaru.
Leviticus 26:39 in English
- King James Version (KJV)
- And they that are left of you shall pine away in their iniquity in your enemies’ lands; and also in the iniquities of their fathers shall they pine away with them.
- World English Bible (WEB)
- Those of you who are left will pine away in their iniquity in your enemies’ lands; and also in the iniquities of their fathers they shall pine away with them.
- American Standard Version (ASV)
- And they that are left of you shall pine away in their iniquity in your enemies’ lands; and also in the iniquities of their fathers shall they pine away with them.
- Bible in Basic English (BBE)
- And those of you who are still living will be wasting away in their sins in the land of your haters; in the sins of their fathers they will be wasting away.
- Darby Translation (DBY)
- And they that remain of you shall waste away through their iniquity in your enemies' lands; and also through the iniquities of their fathers shall they waste away with them.
- Webster's Bible (WBS)
- And they that are left of you shall pine away in their iniquity in your enemies' lands; and also in the iniquities of their fathers shall they pine away with them.
- Young's Literal Translation (YLT)
- 'And those who are left of you — they consume away in their iniquity, in the lands of your enemies; and also in the iniquities of their fathers, with them they consume away.
Read in context
- 37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- 38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- 39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- 40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- 41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
Cross references
- Ezekiel 4:17 ಯೆಹೆಜ್ಕೇಲನು 4:17ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Ezekiel 24:23 ಯೆಹೆಜ್ಕೇಲನು 24:23ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ.
- Ezekiel 33:10 ಯೆಹೆಜ್ಕೇಲನು 33:10ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
- Matthew 23:35–36 ಮತ್ತಾಯನು 23:35–36ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Deuteronomy 28:65 ಧರ್ಮೋಪದೇಶಕಾಂಡ 28:65ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Romans 11:8–10 ರೋಮಾಪುರದವರಿಗೆ 11:8–10(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Ezekiel 18:19 ಯೆಹೆಜ್ಕೇಲನು 18:19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
- Exodus 34:7 ವಿಮೋಚನಕಾಂಡ 34:7ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.
- Deuteronomy 5:9 ಧರ್ಮೋಪದೇಶಕಾಂಡ 5:9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.