Leviticus · chapter 26 · verse 4
Leviticus 26:4 in Kannada
ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
Nimage maleyannu takkakaaladalli surisuvenu. Aaga bhoomiyu adara beleyannu koduvadu. Holada maragalu avugala phalavannu koduvavu.
Leviticus 26:4 in English
- King James Version (KJV)
- Then I will give you rain in due season, and the land shall yield her increase, and the trees of the field shall yield their fruit.
- World English Bible (WEB)
- then I will give you your rains in their season, and the land shall yield its increase, and the trees of the field shall yield their fruit.
- American Standard Version (ASV)
- then I will give your rains in their season, and the land shall yield its increase, and the trees of the field shall yield their fruit.
- Bible in Basic English (BBE)
- Then I will give you rain at the right time, and the land will give her increase and the trees of the field will give their fruit;
- Darby Translation (DBY)
- then I will give your rain in the season thereof, and the land shall yield its produce, and the trees of the field shall yield their fruit;
- Webster's Bible (WBS)
- Then I will give you rain in due season, and the land shall yield her increase, and the trees of the field shall yield their fruit:
- Young's Literal Translation (YLT)
- then I have given your rains in their season, and the land hath given her produce, and the tree of the field doth give its fruit;
Read in context
- 2ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
- 3ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
- 4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- 5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- 6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
Cross references
- Zechariah 8:12 ಜೆಕರ್ಯ 8:12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- Psalm 67:6 ಕೀರ್ತನೆಗಳು 67:6ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Isaiah 30:23 ಯೆಶಾಯ 30:23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
- Deuteronomy 11:14 ಧರ್ಮೋಪದೇಶಕಾಂಡ 11:14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- Leviticus 25:21 ಯಾಜಕಕಾಂಡ 25:21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- Ezekiel 36:30 ಯೆಹೆಜ್ಕೇಲನು 36:30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
- Job 5:10 ಯೋಬನು 5:10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;
- Ezekiel 34:26–27 ಯೆಹೆಜ್ಕೇಲನು 34:26–27ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- Deuteronomy 28:12 ಧರ್ಮೋಪದೇಶಕಾಂಡ 28:12ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.
- Joel 2:23–24 ಯೋವೇಲ 2:23–24ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ. ಕಣಗಳು ಧಾನ್ಯದಿಂದ ತುಂಬುವವು; ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವವು.
- Psalm 68:9 ಕೀರ್ತನೆಗಳು 68:9ಓ ದೇವರೇ, ನೀನು ಸಮೃದ್ಧಿಯಾಗಿ ಮಳೆಯನ್ನು ಸುರಿಸಿದಿ; ಇದರಿಂದ ದಣಿದ ನಿನ್ನ ಬಾಧ್ಯ ತೆಯನ್ನು ನೀನು ಸ್ಥಿರಪಡಿಸಿದಿ.
- Psalm 85:12 ಕೀರ್ತನೆಗಳು 85:12ಹೌದು, ಕರ್ತನು ಒಳ್ಳೇದನ್ನು ಮಾಡುವನು. ನಮ್ಮ ಭೂಮಿಯು ಅದರ ಬೆಳೆಯನ್ನು ಕೊಡುವದು.ನೀತಿಯು ಆತನ ಮುಂದೆ ಹೋಗುತ್ತಾ ನಾವು ಆತನ ಹೆಜ್ಜೆಗಳಲ್ಲಿ ನಡೆಯುವಂತೆ ಮಾರ್ಗವನ್ನು ಮಾಡುವದು.