Leviticus · chapter 26 · verse 40
Leviticus 26:40 in Kannada
ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
Aaga avaru nanage maadida tamma akramavannoo tamma pitrugalaakramavannoo taavu nanage virodhavaagi nadedu kondaddarinda
Leviticus 26:40 in English
- King James Version (KJV)
- If they shall confess their iniquity, and the iniquity of their fathers, with their trespass which they trespassed against me, and that also they have walked contrary unto me;
- World English Bible (WEB)
- “‘If they confess their iniquity and the iniquity of their fathers, in their trespass which they trespassed against me; and also that because they walked contrary to me,
- American Standard Version (ASV)
- And they shall confess their iniquity, and the iniquity of their fathers, in their trespass which they trespassed against me, and also that, because they walked contrary unto me,
- Bible in Basic English (BBE)
- And they will have grief for their sins and for the sins of their fathers, when their hearts were untrue to me, and they went against me;
- Darby Translation (DBY)
- And they shall confess their iniquity, and the iniquity of their fathers, through their unfaithfulness wherein they were unfaithful to me, and also that they have walked contrary unto me,
- Webster's Bible (WBS)
- If they shall confess their iniquity, and the iniquity of their fathers, with their trespass which they trespassed against me, and that also they have walked contrary to me;
- Young's Literal Translation (YLT)
- 'And — they have confessed their iniquity, and the iniquity of their fathers, in their trespass which they have trespassed against Me, and also, that they have walked with Me, in opposition,
Read in context
- 38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- 39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- 40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- 41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- 42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Nehemiah 9:2–5 ನೆಹೆಮೀಯ 9:2–5ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು. ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು. ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು. ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Numbers 5:7 ಅರಣ್ಯಕಾಂಡ 5:7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
- Deuteronomy 30:1–3 ಧರ್ಮೋಪದೇಶಕಾಂಡ 30:1–3ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- 1 Kings 8:33–36 1 ಅರಸುಗಳು 8:33–36ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು. ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.
- 1 Kings 8:47 1 ಅರಸುಗಳು 8:47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Leviticus 26:27–28 ಯಾಜಕಕಾಂಡ 26:27–28ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- Job 33:27–28 ಯೋಬನು 33:27–28ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ; ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.