Leviticus · chapter 26 · verse 41
Leviticus 26:41 in Kannada
ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
Naanoo avarige virodhavaagi nadedukondu tamma shatrugala deshakke baramaadiddannu arikemaadi parichhedane illada avara hrudayavu taggisalpattu tamma akramadinda untaada shikshege avaru oppikolluvadaadare
Leviticus 26:41 in English
- King James Version (KJV)
- And [that] I also have walked contrary unto them, and have brought them into the land of their enemies; if then their uncircumcised hearts be humbled, and they then accept of the punishment of their iniquity:
- World English Bible (WEB)
- I also walked contrary to them, and brought them into the land of their enemies; if then their uncircumcised heart is humbled, and they then accept the punishment of their iniquity,
- American Standard Version (ASV)
- I also walked contrary unto them, and brought them into the land of their enemies: if then their uncircumcised heart be humbled, and they then accept of the punishment of their iniquity;
- Bible in Basic English (BBE)
- So that I went against them and sent them away into the land of their haters: if then the pride of their hearts is broken and they take the punishment of their sins,
- Darby Translation (DBY)
- so that I also walked contrary unto them, and brought them into the land of their enemies. If then their uncircumcised heart be humbled, and they then accept the punishment of their iniquity,
- Webster's Bible (WBS)
- And [that] I also have walked contrary to them, and have brought them into the land of their enemies; if then their uncircumcised hearts shall be humbled, and they then accept of the punishment of their iniquity:
- Young's Literal Translation (YLT)
- also I walk to them in opposition, and have brought them into the land of their enemies — or then their uncircumcised heart is humbled, and then they accept the punishment of their iniquity, —
Read in context
- 39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- 40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
- 41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- 42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- 43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
Cross references
- 2 Chronicles 12:6–7 2 ಪೂರ್ವಕಾಲವೃತ್ತಾಂತ 12:6–7ಆದದರಿಂದ ಇಸ್ರಾಯೇಲಿನ ಪ್ರಧಾನರೂ ಅರಸನೂ ತಮ್ಮನ್ನು ತಗ್ಗಿಸಿಕೊಂಡುಕರ್ತನು ನೀತಿವಂತನು ಅಂದರು. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- 1 Kings 21:29 1 ಅರಸುಗಳು 21:29ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
- Jeremiah 9:25–26 ಯೆರೆಮೀಯ 9:25–26ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ. ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Jeremiah 6:10 ಯೆರೆಮೀಯ 6:10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- 2 Chronicles 32:26 2 ಪೂರ್ವಕಾಲವೃತ್ತಾಂತ 32:26ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ.
- Colossians 2:11 ಕೊಲೊಸ್ಸೆಯವರಿಗೆ 2:11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
- Ezekiel 20:43 ಯೆಹೆಜ್ಕೇಲನು 20:43ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು ನೀವು ಯಾವ ಸಂಗತಿ ಗಳಿಂದ ಅಶುದ್ಧವಾಗಿದ್ದಿರೋ ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕಮಾಡಿಕೊಳ್ಳುವಿರಿ; ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿ ಯಲ್ಲಿಯೇ ನೀವು ಅಸಹ್ಯರಾಗುವಿರಿ.