Leviticus · chapter 26 · verse 44
Leviticus 26:44 in Kannada
ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
Aadaagyoo avaru tamma shatrugala deshadalliruvaaga avarannu tallibidadeyoo asahyisadeyoo sampoornavaagi naashamaadadeyoo avara sangada iruva nanna odambadikeyannu muriyadeyoo iruvenu; avara devaraagiruva kartanu naane.
Leviticus 26:44 in English
- King James Version (KJV)
- And yet for all that, when they be in the land of their enemies, I will not cast them away, neither will I abhor them, to destroy them utterly, and to break my covenant with them: for I [am] the LORD their God.
- World English Bible (WEB)
- Yet for all that, when they are in the land of their enemies, I will not reject them, neither will I abhor them, to destroy them utterly and to break my covenant with them; for I am the LORD their God.
- American Standard Version (ASV)
- And yet for all that, when they are in the land of their enemies, I will not reject them, neither will I abhor them, to destroy them utterly, and to break my covenant with them; for I am Jehovah their God;
- Bible in Basic English (BBE)
- But for all that, when they are in the land of their haters I will not let them go, or be turned away from them, or give them up completely; my agreement with them will not be broken, for I am the Lord their God.
- Darby Translation (DBY)
- And yet for all that, when they are in the land of their enemies, I will not despise them, and will not abhor them, to make an end of them utterly, to break my covenant with them, for I am Jehovah their God.
- Webster's Bible (WBS)
- And yet for all that, when they shall be in the land of their enemies, I will not cast them away, neither will I abhor them, to destroy them utterly, and to break my covenant with them; for I [am] the LORD their God.
- Young's Literal Translation (YLT)
- and also even this, in their being in the land of their enemies, I have not rejected them, nor have I loathed them, to consume them, to break My covenant with them; for I [am] Jehovah their God; —
Read in context
- 42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- 43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
- 44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- 45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- 46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Cross references
- Romans 11:2 ರೋಮಾಪುರದವರಿಗೆ 11:2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Deuteronomy 4:29–31 ಧರ್ಮೋಪದೇಶಕಾಂಡ 4:29–31ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ. ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- Nehemiah 9:31 ನೆಹೆಮೀಯ 9:31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- 2 Kings 13:23 2 ಅರಸುಗಳು 13:23ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Psalm 89:33 ಕೀರ್ತನೆಗಳು 89:33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- Jeremiah 14:21 ಯೆರೆಮೀಯ 14:21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Ezekiel 16:60 ಯೆಹೆಜ್ಕೇಲನು 16:60ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
- Jeremiah 33:26 ಯೆರೆಮೀಯ 33:26ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Ezekiel 14:22–23 ಯೆಹೆಜ್ಕೇಲನು 14:22–23ಆದಾಗ್ಯೂ ಇಗೋ, ಅದರಲ್ಲಿ ಕುಮಾರ ಕುಮಾರ್ತೆಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲ್ಪಡುವರು. ಇಗೋ, ಅವರು ನಿಮ್ಮ ಬಳಿಗೆ ಬಂದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ನಾನು ಅವರ ಮೇಲೆ ತಂದ ಎಲ್ಲವುಗಳ ವಿಷಯವಾಗಿಯೂ ಸಮಾಧಾನ ಹೊಂದು ವಿರಿ.ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 33:20–21 ಯೆರೆಮೀಯ 33:20–21ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.