Leviticus · chapter 26 · verse 8
Leviticus 26:8 in Kannada
ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
Nimmalli aidu mandi nooru mandiyannu hindattuvaru. Nimmalli nooru mandi hattu saavira mandiyannu attibiduvaru. Nimma shatrugalu nimma munde kattiyinda beeluvaru.
Leviticus 26:8 in English
- King James Version (KJV)
- And five of you shall chase an hundred, and an hundred of you shall put ten thousand to flight: and your enemies shall fall before you by the sword.
- World English Bible (WEB)
- Five of you shall chase a hundred, and a hundred of you shall chase ten thousand; and your enemies shall fall before you by the sword.
- American Standard Version (ASV)
- And five of you shall chase a hundred, and a hundred of you shall chase ten thousand; and your enemies shall fall before you by the sword.
- Bible in Basic English (BBE)
- Then five of you will put to flight a hundred, and a hundred of you will put to flight ten thousand, and all who are against you will be put to death by your swords.
- Darby Translation (DBY)
- and five of you shall chase a hundred, and a hundred of you shall put ten thousand to flight; and your enemies shall fall beside you by the sword.
- Webster's Bible (WBS)
- And five of you shall chase a hundred, and a hundred of you shall put ten thousand to flight: and your enemies shall fall before you by the sword.
- Young's Literal Translation (YLT)
- and five of you have pursued a hundred, and a hundred of you do pursue a myriad; and your enemies have fallen before you by the sword.
Read in context
- 6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- 7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
- 8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- 9ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
Cross references
- Joshua 23:10 ಯೆಹೋಶುವ 23:10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
- Deuteronomy 28:7 ಧರ್ಮೋಪದೇಶಕಾಂಡ 28:7ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Judges 7:19–21 ನ್ಯಾಯಸ್ಥಾಪಕರು 7:19–21ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು.
- 1 Chronicles 11:20 1 ಪೂರ್ವಕಾಲವೃತ್ತಾಂತ 11:20ಇದಲ್ಲದೆ ಯೋವಾಬನ ಸಹೋದರನಾದ ಅಬ್ಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನಾಗಿದ್ದನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ ಮೂವರಲ್ಲಿ ಹೆಸರುಗೊಂಡವನಾಗಿದ್ದನು.
- Numbers 14:9 ಅರಣ್ಯಕಾಂಡ 14:9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- 1 Samuel 14:6–16 1 ಸಮುವೇಲನು 14:6–16ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು. ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ--ನಿನ್ನ ಹೃದಯದಲ್ಲಿ ಇರುವದನ್ನೆಲ್ಲಾ ಮಾಡು, ನಡೆ; ಇಗೋ, ನಿನ್ನ ಹೃದಯಕ್ಕೆ ಸರಿಯಾಗಿ ನಾನೂ ನಿನ್ನ ಸಂಗಡ ಇದ್ದೇನೆ ಅಂದನು. ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು. ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು. ಒಂದು ವೇಳೆ ಅವರುನಮ್ಮ ಬಳಿಗೆ ಬನ್ನಿರಿ ಎಂದು ಹೇಳಿದರೆ ಹೋಗುವೆವು. ಕರ್ತನು ಅವರನ್ನು ನಮ್ಮ ಕೈಗೆ ಒಪ್ಪಿಸಿ ಕೊಟ್ಟನೆಂಬದಕ್ಕೆ ಇದೇ ನಮಗೆ ಗುರುತಾಗಿರುವದು ಅಂದನು. ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು. ಯೋನಾತಾನನು ತನ್ನ ಕೈಗಳಿಂದಲೂ ಕಾಲುಗಳಿಂದ ಲೂ ಹತ್ತಿದನು. ಅವನ ಆಯುಧಗಳನ್ನು ಹೊರುವ ವನು ಅವನ ಹಿಂದೆ ಹತ್ತಿದನು. ಆಗ ಪಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧ ಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು. ಯೋನಾತಾನನೂ ಅವನ ಆಯುಧ ಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಬಿದ್ದವರು ಸುಮಾರು ಇಪ್ಪತ್ತು ಜನರಾಗಿದ್ದರು. ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
- 1 Chronicles 11:11 1 ಪೂರ್ವಕಾಲವೃತ್ತಾಂತ 11:11ದಾವೀದನ ಸಂಗಡ ಇದ್ದ ಪರಾಕ್ರಮಶಾಲಿಗಳ ಲೆಕ್ಕವೇನಂದರೆ--ಹಕ್ಮೋನಿಯನಾದ ಯಾಷೊಬ್ಬಾ ಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು; ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿ ಯನ್ನು ಎತ್ತಿ ಒಂದೇ ಸಾರಿ ಅವರನ್ನು ಕೊಂದು ಹಾಕಿದನು.
- Psalm 81:14–15 ಕೀರ್ತನೆಗಳು 81:14–15ತೀವ್ರವಾಗಿ ಅವರ ಶತ್ರುಗಳನ್ನು ಅಣಗಿಸುವೆನು; ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
- 1 Samuel 17:45–52 1 ಸಮುವೇಲನು 17:45–52ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ. ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲ್ಯರೊಳಗೆ ದೇವರು ಇದ್ದಾನೆಂದು ಭೂಲೋಕದವರೆಲ್ಲರೂ ತಿಳಿ ಯುವರು. ಕರ್ತನು ಕತ್ತಿಯಿಂದಲೂ ಈಟಿಯಿಂದಲೂ ರಕ್ಷಿಸುವದಿಲ್ಲ ಎಂದು ಈ ಸಭೆಯೆಲ್ಲಾ ತಿಳಿದುಕೊಳ್ಳು ವದು; ಯಾಕಂದರೆ ಯುದ್ಧವು ಕರ್ತನದು; ಆತನು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆ ಪಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸವಿಾಪಿಸಿ ಬರುವಾಗ ದಾವೀದನು ತ್ವರೆಯಾಗಿ ಆ ಸೈನ್ಯಕ್ಕೆ ಫಿಲಿಷ್ಟಿಯನಿಗೆದುರಿಗೆ ಓಡಿಹೋಗಿ ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು. ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು. ದಾವೀದನ ಕೈಯಲ್ಲಿ ಕತ್ತಿಯು ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನೇ ಒರೆಯಿಂದ ಕಿತ್ತು ಅವನ ತಲೆಯನ್ನು ಕಡಿದು ಅವನನ್ನು ಕೊಂದು ಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತುಹೋದದ್ದನ್ನು ಕಂಡಾಗ ಓಡಿಹೋದರು. ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.