Leviticus · chapter 27 · verse 30
Leviticus 27:30 in Kannada
ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
Bhoomiya beejadallaagali marada phalada llaagali hattane paalellaa kartanade. Adu kartanige parishuddhavaadaddu.
Leviticus 27:30 in English
- King James Version (KJV)
- And all the tithe of the land, [whether] of the seed of the land, [or] of the fruit of the tree, [is] the LORD’s: [it is] holy unto the LORD.
- World English Bible (WEB)
- “‘All the tithe of the land, whether of the seed of the land or of the fruit of the trees, is the LORD’s. It is holy to the LORD.
- American Standard Version (ASV)
- And all the tithe of the land, whether of the seed of the land, or of the fruit of the tree, is Jehovah’s: it is holy unto Jehovah.
- Bible in Basic English (BBE)
- And every tenth part of the land, of the seed planted, or of the fruit of trees, is holy to the Lord.
- Darby Translation (DBY)
- And as to every tithe of the land, of the seed of the land, and of the fruit of the tree, it is Jehovah's: it is holy to Jehovah.
- Webster's Bible (WBS)
- And all the tithe of the land, [whether] of the seed of the land, [or] of the fruit of the tree, [is] the LORD'S: [it is] holy to the LORD.
- Young's Literal Translation (YLT)
- And all tithe of the land, of the seed of the land, of the fruit of the tree, is Jehovah's — holy to Jehovah.
Read in context
- 28ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
- 29ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- 30ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು.
- 31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
- 32ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು.
Cross references
- Matthew 23:23 ಮತ್ತಾಯನು 23:23ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
- Nehemiah 10:37–38 ನೆಹೆಮೀಯ 10:37–38ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- Nehemiah 13:12 ನೆಹೆಮೀಯ 13:12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
- Genesis 28:22 ಆದಿಕಾಂಡ 28:22ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
- 2 Chronicles 31:12 2 ಪೂರ್ವಕಾಲವೃತ್ತಾಂತ 31:12ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು.
- 2 Chronicles 31:5–6 2 ಪೂರ್ವಕಾಲವೃತ್ತಾಂತ 31:5–6ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು; ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Malachi 3:8–10 ಮಲಾಕಿಯ 3:8–10ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 14:20 ಆದಿಕಾಂಡ 14:20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Hebrews 7:5–9 ಇಬ್ರಿಯರಿಗೆ 7:5–9ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
- Luke 11:42 ಲೂಕನು 11:42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.