Leviticus · chapter 3 · verse 12
Leviticus 3:12 in Kannada
ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
Avana samarpaneyu mekeyaagiddare adannu avanu kartana edurinalli samarpisabeku.
Leviticus 3:12 in English
- King James Version (KJV)
- And if his offering [be] a goat, then he shall offer it before the LORD.
- World English Bible (WEB)
- “‘If his offering is a goat, then he shall offer it before the LORD.
- American Standard Version (ASV)
- And if his oblation be a goat, then he shall offer it before Jehovah:
- Bible in Basic English (BBE)
- And if his offering is a goat, then let it be placed before the Lord,
- Darby Translation (DBY)
- And if his offering be a goat, then he shall present it before Jehovah.
- Webster's Bible (WBS)
- And if his offering [shall be] a goat, then he shall offer it before the LORD.
- Young's Literal Translation (YLT)
- 'And if his offering [is] a goat, then he hath brought it near before Jehovah,
Read in context
- 10ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು.
- 11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- 12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
- 13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
- 14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
Cross references
- Leviticus 1:10 ಯಾಜಕಕಾಂಡ 1:10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Leviticus 9:3 ಯಾಜಕಕಾಂಡ 9:3ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.
- Matthew 25:32–33 ಮತ್ತಾಯನು 25:32–33ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು.
- Leviticus 10:16 ಯಾಜಕಕಾಂಡ 10:16ಆಗ ಮೋಶೆಯು ಶ್ರದ್ಧೆಯಿಂದ ಪಾಪದ ಬಲಿಯ ಮೇಕೆಯನ್ನು ಹುಡುಕಿದಾಗ ಅಗೋ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಕುಮಾರರಾದ ಎಲ್ಲಾಜಾರನ ಮೇಲೆಯೂ ಈತಾಮಾರನ ಮೇಲೆಯೂ ಕೋಪಗೊಂಡು ಹೇಳಿದ್ದೇನಂದರೆ--
- Leviticus 1:6 ಯಾಜಕಕಾಂಡ 1:6ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು.
- Leviticus 3:7–17 ಯಾಜಕಕಾಂಡ 3:7–17ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Leviticus 22:19–27 ಯಾಜಕಕಾಂಡ 22:19–27ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ. ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವದನ್ನೂ ಕರ್ತನಿಗೆ ಸಮರ್ಪಿಸಬಾರದು. ಅಲ್ಲದೆ ನಿಮ್ಮ ದೇಶದೊಳಗಿರುವ ಅಂಥ ಯಾವ ಸಮರ್ಪಣೆ ಯನ್ನಾ ದರೂ ನೀವು ಸಮರ್ಪಿಸಬಾರದು. ಇದಲ್ಲದೆ ಪರಕೀಯನ ಕೈಯೊಳಗಿಂದಲೂ ಅಂಥವುಗಳಲ್ಲಿ ಯಾವದನ್ನಾದರೂ ನಿಮ್ಮ ದೇವರಿಗೆ ರೊಟ್ಟಿಯಾಗಿ ಅರ್ಪಿಸಬಾರದು. ಅವರ ನೀತಿಭ್ರಷ್ಠತೆಯೂ ದೋಷ ಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರ ವಾಗಿ ಅಂಗೀಕಾರವಾಗುವದಿಲ್ಲ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಹೋರಿಯನ್ನಾಗಲಿ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ ಏಳು ದಿವಸಗಳ ವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಕರ್ತನಿಗೆ ದಹನಬಲಿಯಾಗಿ ಅಂಗೀ ಕಾರವಾಗಿರುವದು.
- Leviticus 3:1 ಯಾಜಕಕಾಂಡ 3:1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
- Leviticus 9:15 ಯಾಜಕಕಾಂಡ 9:15ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.