Leviticus · chapter 3 · verse 16
Leviticus 3:16 in Kannada
ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Yaajakanu avugalannu yajnyavediya mele sudabeku; adu benkiyinda maadida yajnyaa rpaneyu suvaasaneya aahaaravaagiruvadu. Ellaa kobbu kartanade.neevu kobbannaagali raktavannaagali tinnadante idu nimma santatiya varigellaa ellaa nivaasagalalli nirantaravaada kattaleyaagiruvadu.
Leviticus 3:16 in English
- King James Version (KJV)
- And the priest shall burn them upon the altar: [it is] the food of the offering made by fire for a sweet savour: all the fat [is] the LORD’s.
- World English Bible (WEB)
- The priest shall burn them on the altar: it is the food of the offering made by fire, for a pleasant aroma; all the fat is the LORD’s.
- American Standard Version (ASV)
- And the priest shall burn them upon the altar: it is the food of the offering made by fire, for a sweet savor; all the fat is Jehovah’s.
- Bible in Basic English (BBE)
- That it may be burned by the priest on the altar; it is the food of the offering made by fire for a sweet smell: all the fat is the Lord's.
- Darby Translation (DBY)
- and the priest shall burn them on the altar: [it is] the food of the offering by fire for a sweet odour. All the fat [shall be] Jehovah's.
- Webster's Bible (WBS)
- And the priest shall burn them upon the altar: [it is] the food of the offering made by fire for a sweet savor: all the fat [is] the LORD'S.
- Young's Literal Translation (YLT)
- and the priest hath made them a perfume on the altar — bread of a fire-offering, for sweet fragrance; all the fat [is] Jehovah's.
Read in context
- 14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
- 15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
- 16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- 17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Cross references
- Leviticus 7:23–25 ಯಾಜಕಕಾಂಡ 7:23–25ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು. ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
- Leviticus 3:14–15 ಯಾಜಕಕಾಂಡ 3:14–15ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
- Leviticus 3:9–11 ಯಾಜಕಕಾಂಡ 3:9–11ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
- Leviticus 4:31 ಯಾಜಕಕಾಂಡ 4:31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 1 Samuel 2:15–16 1 ಸಮುವೇಲನು 2:15–16ಇದಲ್ಲದೆ ಕೊಬ್ಬನ್ನು ಸುಡುವದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು ಬಲಿಯನ್ನು ಅರ್ಪಿಸುವವನ ಸಂಗಡ--ಯಾಜಕನಿಗೆ ಸುಡುವದಕ್ಕೆ ಮಾಂಸವನ್ನು ಕೊಡು; ಯಾಕಂದರೆ ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತಕ್ಕೊಳ್ಳು ವದಿಲ್ಲ; ಅದು ಹಸಿಮಾಂಸವೇ ಆಗಬೇಕು ಅನ್ನು ವನು. ಯಾವ ಮನುಷ್ಯನಾದರೂ ಅವನಿಗೆ--ಅವರು ದಿನವೆಲ್ಲಾ ಹಾಗೆ ಕೊಬ್ಬನ್ನು ಸುಡಲೇಬೇಕು. ತರುವಾಯ ನೀನು ನಿನ್ನ ಪ್ರಾಣದ ಇಚ್ಛೆಯ ಪ್ರಕಾರ ತೆಗೆದುಕೋ ಎಂದು ಹೇಳಿದರೆ ಅವನು--ಹಾಗಲ್ಲ, ಈಗಲೇ ಕೊಡು; ಇಲ್ಲದಿದ್ದರೆ ಬಲವಂತವಾಗಿ ತಕ್ಕೊಳ್ಳುವೆನು ಎಂದು ಅನ್ನುವನು.
- Exodus 29:22 ವಿಮೋಚನಕಾಂಡ 29:22ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- Leviticus 3:3–5 ಯಾಜಕಕಾಂಡ 3:3–5ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Exodus 29:13 ವಿಮೋಚನಕಾಂಡ 29:13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
- Leviticus 4:8–19 ಯಾಜಕಕಾಂಡ 4:8–19ಅವನು ಪಾಪದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು; ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆಯಬೇಕು. ಸಮಾಧಾನದ ಯಜ್ಞಸಮರ್ಪಣೆಯನ್ನು ಹೋರಿ ಯಿಂದ ತೆಗೆಯಲ್ಪಟ್ಟಂತೆಯೇ ತೆಗೆಯಬೇಕು; ಯಾಜಕನು ದಹನಬಲಿ ಯಜ್ಞವೇದಿಯ ಮೇಲೆ ಅವುಗಳನ್ನು ಸುಡಬೇಕು. ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ ಇಡೀ ಹೋರಿಯನ್ನು ಪಾಳೆಯದ ಆಚೆಗಿರುವ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು ಅದನ್ನು ಕಟ್ಟಿಗೆಯ ಮೇಲೆ ಬೆಂಕಿಯಿಂದ ಸುಡ ಬೇಕು. ಅದನ್ನು ಬೂದಿ ಚೆಲ್ಲುವ ಸ್ಥಳದಲ್ಲಿ ಸುಡಬೇಕು. ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.