Leviticus · chapter 3 · verse 6
Leviticus 3:6 in Kannada
ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
Avana kaanikeyu samaadhaanada samarpaneya yajnyavaagi adu tanna hindinindaada kaanike yaagiddare gandaagali illave hennaagali dosha villaddaagi adannu avanu kartanige samarpisabeku.
Leviticus 3:6 in English
- King James Version (KJV)
- And if his offering for a sacrifice of peace offering unto the LORD [be] of the flock; male or female, he shall offer it without blemish.
- World English Bible (WEB)
- “‘If his offering for a sacrifice of peace offerings to the LORD is from the flock, either male or female, he shall offer it without defect.
- American Standard Version (ASV)
- And if his oblation for a sacrifice of peace-offerings unto Jehovah be of the flock; male or female, he shall offer it without blemish.
- Bible in Basic English (BBE)
- And if what he gives for a peace-offering to the Lord is of the flock, let him give a male or female, without any mark on it.
- Darby Translation (DBY)
- And if his offering for a sacrifice of peace-offering to Jehovah be of small cattle, male or female, he shall present it without blemish.
- Webster's Bible (WBS)
- And if his offering for a sacrifice of peace-offering to the LORD shall be [of] the flock, male or female; he shall offer it without blemish.
- Young's Literal Translation (YLT)
- 'And if his offering [is] out of the flock for a sacrifice of peace-offerings to Jehovah, male or female, a perfect one he doth bring near;
Read in context
- 4ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
- 5ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- 6ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು.
- 7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
- 8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
Cross references
- Leviticus 3:1–17 ಯಾಜಕಕಾಂಡ 3:1–17ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ. ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು. ಅವನ ಕಾಣಿಕೆಯು ಸಮಾಧಾನದ ಸಮರ್ಪಣೆಯ ಯಜ್ಞವಾಗಿ ಅದು ತನ್ನ ಹಿಂಡಿನಿಂದಾದ ಕಾಣಿಕೆ ಯಾಗಿದ್ದರೆ ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ದೋಷ ವಿಲ್ಲದ್ದಾಗಿ ಅದನ್ನು ಅವನು ಕರ್ತನಿಗೆ ಸಮರ್ಪಿಸಬೇಕು. ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು. ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು. ಅದರ ಇಡೀ ಹಿಂಭಾಗವನ್ನೂ ಕೊಬ್ಬನ್ನೂ ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳು ಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ತೆಗೆದುಕೊಂಡು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಕರ್ತನಿಗೆ ಸಮರ್ಪಿಸಬೇಕು. ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ. ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು. ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು. ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Ephesians 2:13–22 ಎಫೆಸದವರಿಗೆ 2:13–22ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Leviticus 1:2 ಯಾಜಕಕಾಂಡ 1:2ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.
- Titus 2:11–12 ತೀತನಿಗೆ 2:11–12ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು
- Leviticus 1:10 ಯಾಜಕಕಾಂಡ 1:10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ