Leviticus · chapter 4 · verse 22
Leviticus 4:22 in Kannada
ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
Obba adhipatiyu paapamaadi tanna deva raada kartana aajnyegalige virodhavaagi tiliyade maadabaaradavugalannu maadi aparaadhiyaagiddare,
Leviticus 4:22 in English
- King James Version (KJV)
- When a ruler hath sinned, and done [somewhat] through ignorance [against] any of the commandments of the LORD his God [concerning things] which should not be done, and is guilty;
- World English Bible (WEB)
- “‘When a ruler sins, and unwittingly does any one of all the things which the LORD his God has commanded not to be done, and is guilty,
- American Standard Version (ASV)
- When a ruler sinneth, and doeth unwittingly any one of all the things which Jehovah his God hath commanded not to be done, and is guilty;
- Bible in Basic English (BBE)
- If a ruler does wrong, and in error does any of the things which, by the order of the Lord his God, are not to be done, causing sin to come on him;
- Darby Translation (DBY)
- When a prince sinneth and through inadvertence doeth [somewhat against] any of all the commandments of Jehovah his God [in things] which should not be done, and is guilty;
- Webster's Bible (WBS)
- When a ruler hath sinned, and done [somewhat] through ignorance [against] any of the commandments of the LORD his God [concerning things] which should not be done, and is guilty;
- Young's Literal Translation (YLT)
- 'When a prince doth sin, and hath done [something against] one of all the commands of Jehovah his God [regarding things] which are not to be done, through ignorance, and hath been guilty —
Read in context
- 20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- 21ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- 22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
- 23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
- 24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
Cross references
- Leviticus 4:2 ಯಾಜಕಕಾಂಡ 4:2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- Leviticus 4:13 ಯಾಜಕಕಾಂಡ 4:13ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- Leviticus 4:27 ಯಾಜಕಕಾಂಡ 4:27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- Numbers 31:13 ಅರಣ್ಯಕಾಂಡ 31:13ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
- 2 Samuel 24:10–17 2 ಸಮುವೇಲನು 24:10–17ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು. ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ-- ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು. ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು. ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು. ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು. ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- 2 Samuel 21:1–3 2 ಸಮುವೇಲನು 21:1–3ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು. ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು) ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
- Numbers 16:2 ಅರಣ್ಯಕಾಂಡ 16:2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.