Leviticus · chapter 4 · verse 29
Leviticus 4:29 in Kannada
ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
Avanu tanna kaiyannu paapada baliya melittu aa paapada baliyannu dahanabaliya sthaladalli vadhisabeku.
Leviticus 4:29 in English
- King James Version (KJV)
- And he shall lay his hand upon the head of the sin offering, and slay the sin offering in the place of the burnt offering.
- World English Bible (WEB)
- He shall lay his hand on the head of the sin offering, and kill the sin offering in the place of burnt offering.
- American Standard Version (ASV)
- And he shall lay his hand upon the head of the sin-offering, and kill the sin-offering in the place of burnt-offering.
- Bible in Basic English (BBE)
- And he is to put his hand on the head of the sin-offering and put it to death in the place where they put to death the burned offering.
- Darby Translation (DBY)
- And he shall lay his hand on the head of the sin-offering, and slaughter the sin-offering at the place of the burnt-offering.
- Webster's Bible (WBS)
- And he shall lay his hand upon the head of the sin-offering, and slay the sin-offering in the place of the burnt-offering.
- Young's Literal Translation (YLT)
- and he hath laid his hand on the head of the sin-offering, and hath slaughtered the sin-offering in the place of the burnt-offering.
Read in context
- 27ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡ ಬಾರದವುಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ
- 28ಇಲ್ಲವೆ ಅವನು ಮಾಡಿದ ಪಾಪವು ಅವನಿಗೆ ತಿಳಿದುಬಂದರೆ ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಹೆಣ್ಣು ಮರಿಯನ್ನು ತಾನು ಮಾಡಿದ ಪಾಪಕ್ಕಾಗಿ ತರಬೇಕು.
- 29ಅವನು ತನ್ನ ಕೈಯನ್ನು ಪಾಪದ ಬಲಿಯ ಮೇಲಿಟ್ಟು ಆ ಪಾಪದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.
- 30ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು ದಹನ ಬಲಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಆ ಯಜ್ಞವೇದಿಯ ಅಡಿಯಲ್ಲಿ ಹೊಯ್ಯ ಬೇಕು.
- 31ಅವನು ಸಮಾಧಾನ ಯಜ್ಞ ಸಮರ್ಪಣೆಯ ಕೊಬ್ಬನ್ನು ತೆಗೆದಂತೆ ಅದರ ಎಲ್ಲಾ ಕೊಬ್ಬನ್ನು ತೆಗೆಯ ಬೇಕು; ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯನ್ನಾಗಿ ಸುಡಬೇಕು; ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತಮಾಡ ಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Cross references
- Leviticus 4:24 ಯಾಜಕಕಾಂಡ 4:24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
- Leviticus 4:4 ಯಾಜಕಕಾಂಡ 4:4ಅವನು ಆ ಹೋರಿ ಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿಗೆ ತಂದು ತನ್ನ ಕೈಯನ್ನು ಅದರ ತಲೆಯ ಮೇಲಿಟ್ಟು ಆ ಹೋರಿಯನ್ನು ಕರ್ತನ ಮುಂದೆ ವಧಿಸ ಬೇಕು.
- Leviticus 4:15 ಯಾಜಕಕಾಂಡ 4:15ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು.
- Leviticus 1:4 ಯಾಜಕಕಾಂಡ 1:4ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು.
- Leviticus 4:33 ಯಾಜಕಕಾಂಡ 4:33ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಪಾಪದ ಬಲಿಗಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.
- Hebrews 10:4–14 ಇಬ್ರಿಯರಿಗೆ 10:4–14ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.