Leviticus · chapter 5 · verse 11
Leviticus 5:11 in Kannada
ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
Aadare avanu eradu belavagalannaagali illave eradu paarivaalada marigalannaagali taruvadakke ashaktanaagiddare paapamaadidavanu tanna samarpane gaagi ondu ephada hattaneya bhaagadashtu naya vaada hittannu paapada baligaagi tarabeku. Avanu adara mele enneyannu illave saambraaniyannu haakabaaradu. Adu paapada baliyaagide.
Leviticus 5:11 in English
- King James Version (KJV)
- But if he be not able to bring two turtledoves, or two young pigeons, then he that sinned shall bring for his offering the tenth part of an ephah of fine flour for a sin offering; he shall put no oil upon it, neither shall he put [any] frankincense thereon: for it [is] a sin offering.
- World English Bible (WEB)
- “‘But if he can’t afford two turtledoves or two young pigeons, then he shall bring as his offering for that in which he has sinned, one tenth of an ephah of fine flour for a sin offering. He shall put no oil on it, and he shall not put any frankincense on it, for it is a sin offering.
- American Standard Version (ASV)
- But if his means suffice not for two turtle-doves, or two young pigeons, then he shall bring his oblation for that wherein he hath sinned, the tenth part of an ephah of fine flour for a sin-offering: he shall put no oil upon it, neither shall he put any frankincense thereon; for it is a sin-offering.
- Bible in Basic English (BBE)
- But if he has not enough money for two doves or two young pigeons, then let him give, for the sin he has done, the tenth part of an ephah of the best meal, for a sin-offering; let him put no oil on it, and no perfume, for it is a sin-offering.
- Darby Translation (DBY)
- But if his hand cannot attain to two turtle-doves, or two young pigeons, then he that sinned shall bring for his offering the tenth part of an ephah of fine flour for a sin-offering: he shall put no oil on it, neither shall he put frankincense thereon; for it is a sin-offering.
- Webster's Bible (WBS)
- But if he shall not be able to bring two turtle-doves, or two young pigeons; then he that sinned shall bring for his offering the tenth part of an ephah of fine flour for a sin-offering; he shall put no oil upon it, neither shall he put [any] frankincense upon it: for it [is] a sin-offering.
- Young's Literal Translation (YLT)
- 'And if his hand reach not to two turtle-doves, or to two young pigeons, then he hath brought in his offering — he who hath sinned — a tenth of an ephah of flour for a sin-offering; he putteth no oil on it, nor doth he put on it frankincense, for it [is] a sin-offering,
Read in context
- 9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
- 10ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 11ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
- 12ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
- 13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
Cross references
- Numbers 5:15 ಅರಣ್ಯಕಾಂಡ 5:15ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
- Leviticus 2:1–2 ಯಾಜಕಕಾಂಡ 2:1–2ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
- Numbers 15:4–9 ಅರಣ್ಯಕಾಂಡ 15:4–9ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
- Exodus 16:36 ವಿಮೋಚನಕಾಂಡ 16:36ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
- Leviticus 5:9 ಯಾಜಕಕಾಂಡ 5:9ಇದಲ್ಲದೆ ಅವನು ಪಾಪದ ಬಲಿಯ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಯಜ್ಞವೇದಿಯ ಬದಿಯಲ್ಲಿ ಹಿಂಡಬೇಕು; ಅದು ಪಾಪದ ಬಲಿಯಾಗಿದೆ.
- Exodus 16:18 ವಿಮೋಚನಕಾಂಡ 16:18ಓಮೆರ ದಿಂದ ಅಳತೆ ಮಾಡಿದಾಗ ಹೆಚ್ಚು ಕೂಡಿಸಿದವನಿಗೆ ಮಿಕ್ಕಲಿಲ್ಲ, ಕಡಿಮೆ ಕೂಡಿಸಿದವನಿಗೆ ಕೊರತೆಯಾ ಗಲಿಲ್ಲ, ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.
- Leviticus 2:15–16 ಯಾಜಕಕಾಂಡ 2:15–16ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Isaiah 53:2–10 ಯೆಶಾಯ 53:2–10ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Numbers 7:19–89 ಅರಣ್ಯಕಾಂಡ 7:19–89ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯನ್ನೂ ಸಮಾಧಾನದ ಅರ್ಪಣೆಗಳ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂವಾರನ ಮಗನಾದ ನೆತನೇಲನ ಅರ್ಪಣೆಯು. ಮೂರನೆ ದಿವಸದಲ್ಲಿ ಜೆಬುಲೂನನ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗನಾದ ಎಲೀಯಾಬನು ಅರ್ಪಿಸಿದ್ದು. ಅವನ ಅರ್ಪಣೆ ಏನಂದರೆ-- ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಹೇಲೋನನ ಮಗನಾದ ಎಲೀಯಾಬನ ಅರ್ಪಣೆಯು. ನಾಲ್ಕನೇ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾ ನನಾಗಿರುವ ಶೆದೇಯೂರನ ಮಗನಾದ ಎಲೀಚೂ ರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರು ಷದ ಐದು ಕುರಿಮರಿಗಳೂ. ಇದು ಶೆದೇಯೂರನ ಮಗನಾದ ಎಲೀಚೂರನ ಅರ್ಪಣೆಯು. ಐದನೇ ದಿನದಲ್ಲಿ ಸಿಮೆಯೋನ ಮಕ್ಕಳಿಗೆ ಪ್ರಧಾನನಾಗಿರುವ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಅರ್ಪಿಸಿದನು. ಅವನ ಅರ್ಪ ಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಚೂರಿಷದ್ದೈ ಯನ ಮಗನಾದ ಶೆಲುವಿಾಯೇಲನ ಅರ್ಪಣೆಯು. ಆರನೇ ದಿನದಲ್ಲಿ ಗಾದನ ಮಕ್ಕಳಿಗೆ ಪ್ರಧಾನ ನಾಗಿರುವ ದೆಗೂವೇಲನ ಮಗನಾದ ಎಲ್ಯಾಸಾಫನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ದೆಗೂವೇಲನ ಮಗನಾದ ಎಲ್ಯಾಸಾಫನ ಅರ್ಪಣೆಯು. ಏಳನೇ ದಿನದಲ್ಲಿ ಎಫ್ರಾಯಾಮ್ ಮಕ್ಕಳಿಗೆ ಪ್ರಧಾನನಾದ ಅವ್ಮೆಾಹೂದನ ಮಗನಾದ ಎಲೀಷಾಮನು ಅರ್ಪಿಸಿದನು. ಅವನ ಅರ್ಪಣೆ ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕ ವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ. ದಹನ ಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಹೂದನ ಮಗನಾದ ಎಲೀಷಾಮನ ಅರ್ಪಣೆಯು. ಎಂಟನೇ ದಿನದಲ್ಲಿ ಮನಸ್ಸೆ ಮಕ್ಕಳಿಗೆ ಪ್ರಧಾನನಾದ ಪೆದಾಚೂರನ ಮಗನಾದ ಗವ್ಲೆಾ ಯೇಲ್ ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ,--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಪೆದಾಚೂರನ ಮಗನಾದ ಗವ್ಲೆಾಯೇಲನ ಅರ್ಪಣೆಯು. ಒಂಭತ್ತನೇ ದಿನದಲ್ಲಿ ಬೆನ್ಯಾವಿಾನನ ಮಕ್ಕಳಿಗೆ ಪ್ರಧಾನನಾದ ಗಿದ್ಯೋನಿಯ ಮಗನಾದ ಅಬೀದಾ ನನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಗಿದ್ಯೋನಿಯ ಮಗನಾದ ಅಬೀದಾನನ ಅರ್ಪಣೆಯು. ಹತ್ತನೆಯ ದಿನದಲ್ಲಿ ದಾನನ ಮಕ್ಕಳಿಗೆ ಪ್ರಧಾನ ನಾದ ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಅವ್ಮೆಾಷದ್ದೈಯನ ಮಗನಾದ ಅಹೀಗೆಜೆರನ ಅರ್ಪಣೆಯು. ಹನ್ನೊಂದನೆಯ ದಿನದಲ್ಲಿ ಆಶೇರನ ಮಕ್ಕಳಿಗೆ ಪ್ರಧಾನನಾದ ಒಕ್ರಾನನ ಮಗನಾದ ಪಗೀಯೇಲನು ಅರ್ಪಿಸಿದನು. ಅವನ ಆರ್ಪಣೆಯು ಏನಂದರೆನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯ ವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ ಇದು ಒಕ್ರಾನನ ಮಗನಾದ ಪಗೀ ಯೇಲನ ಅರ್ಪಣೆಯು. ಹನ್ನೆರಡನೆ ದಿನದಲ್ಲಿ ನಫ್ತಾಲಿ ಮಕ್ಕಳಿಗೆ ಪ್ರಧಾನ ನಾದ ಏನಾನನ ಮಗನಾದ ಅಹೀರನು ಅರ್ಪಿಸಿದನು. ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಧೂಪದಿಂದ ತುಂಬಿದ್ದ ಹತ್ತು ಶೇಕೆಲಿನಷ್ಟು ತೂಕದ ಬಂಗಾರದ ಒಂದು ಚಮಚ, ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ. ಪಾಪದ ಬಲಿಗಾಗಿ ಆಡುಗಳಲ್ಲಿ ಒಂದು ಮರಿಯೂ ಸಮಾಧಾನದ ಅರ್ಪಣೆಯ ಬಲಿಗಾಗಿ ಎರಡು ಎತ್ತುಗಳೂ ಐದು ಟಗರುಗಳೂ ಐದು ಹೋತಗಳೂ ಮೊದಲನೇ ವರುಷದ ಐದು ಕುರಿಮರಿಗಳೂ. ಇದು ಏನಾನನ ಮಗನಾದ ಅಹೀರನ ಅರ್ಪಣೆಯು. ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್; ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು, ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು. ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- Leviticus 2:4–5 ಯಾಜಕಕಾಂಡ 2:4–5ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.
- Psalm 22:1–21 ಕೀರ್ತನೆಗಳು 22:1–21ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ. ಆದರೆ ನೀನು ಪರಿಶುದ್ಧನಾಗಿದ್ದೀ; ನೀನು ಇಸ್ರಾಯೇಲಿನ ಸ್ತೋತ್ರಗಳಲ್ಲಿ ವಾಸ ಮಾಡುವಾ ತನು. ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ. ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ. ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ. ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ. ಆದರೆ ನೀನು ಗರ್ಭದಿಂದ ನನ್ನನ್ನು ತೆಗೆದಿ; ನನ್ನ ತಾಯಿಯ ಎದೆಯಲ್ಲಿದ್ದಾಗ ನಾನು ನಿರೀಕ್ಷಿಸುವಂತೆ ಮಾಡಿದಿ. ಹುಟ್ಟಿದಂದಿನಿಂದ ನೀನೇ ನನಗೆ ಆಧಾರ; ನನ್ನ ತಾಯಿಯ ಹೊಟ್ಟೆಯಿಂದ ನನ್ನನ್ನು ಬರಮಾಡಿದ ನನ್ನ ದೇವರು ನೀನೇ ಆಗಿದ್ದೀ. ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ. ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Leviticus 5:12 ಯಾಜಕಕಾಂಡ 5:12ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
Original words (Hebrew)
- he · H3027יָד yâd
- bring · H5381נָשַׂג nâsag
- two · H8147שְׁנַיִם shᵉnayim
- turtledoves · H8449תּוֹר tôwr
- two · H8147שְׁנַיִם shᵉnayim
- young · H1121בֵּן bên
- pigeons · H3123יוֹנָה yôwnâh
- sinned · H2398חָטָא châṭâʼ
- bring · H935בּוֹא bôwʼ
- offering · H7133קׇרְבָּן qorbân
- tenth · H6224עֲשִׂירִי ʻăsîyrîy
- ephah · H374אֵיפָה ʼêyphâh
- flour · H5560סֹלֶת çôleth
- offering · H2403חַטָּאָה chaṭṭâʼâh
- put · H7760שׂוּם sûwm
- oil · H8081שֶׁמֶן shemen
- put · H5414נָתַן nâthan
- frankincense · H3828לְבוֹנָה lᵉbôwnâh
- offering · H2403חַטָּאָה chaṭṭâʼâh