Leviticus · chapter 5 · verse 15
Leviticus 5:15 in Kannada
ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
Yaavanaadaroo atikramisi kartana parishuddha vaadavugalannu ariyade paapamaadiddare avanu tanna atikramakkaagi tanna hindugalinda doshavillada tagarannu ninna andaajina prakaara pavitra sthalada shekelugaliganusaaravaagi belliya shekelugalannu ati kramada baligaagi kartanige tarabeku.
Leviticus 5:15 in English
- King James Version (KJV)
- If a soul commit a trespass, and sin through ignorance, in the holy things of the LORD; then he shall bring for his trespass unto the LORD a ram without blemish out of the flocks, with thy estimation by shekels of silver, after the shekel of the sanctuary, for a trespass offering:
- World English Bible (WEB)
- “If anyone commits a trespass, and sins unwittingly regarding the LORD’s holy things, then he shall bring his trespass offering to the LORD: a ram without defect from the flock, according to your estimation in silver by shekels, according to the shekel of the sanctuary, for a trespass offering.
- American Standard Version (ASV)
- If any one commit a trespass, and sin unwittingly, in the holy things of Jehovah; then he shall bring his trespass-offering unto Jehovah, a ram without blemish out of the flock, according to thy estimation in silver by shekels, after the shekel of the sanctuary, for a trespass-offering:
- Bible in Basic English (BBE)
- If anyone is untrue, sinning in error in connection with the holy things of the Lord, let him take his offering to the Lord, a male sheep from the flock, without any mark, of the value fixed by you in silver by shekels, by the scale of the holy place.
- Darby Translation (DBY)
- If any one act unfaithfully and sin through inadvertence in the holy things of Jehovah, then he shall bring his trespass-offering to Jehovah, a ram without blemish out of the small cattle, according to thy valuation by shekels of silver, according to the shekel of the sanctuary, for a trespass-offering.
- Webster's Bible (WBS)
- If a soul shall commit a trespass, and sin through ignorance, in the holy things of the LORD; then he shall bring for his trespass to the LORD a ram without blemish out of the flocks, with thy estimation by shekels of silver, after the shekel of the sanctuary, for a trespass-offering:
- Young's Literal Translation (YLT)
- 'When a person committeth a trespass, and hath sinned through ignorance against the holy things of Jehovah, then he hath brought in his guilt-offering to Jehovah, a ram, a perfect one, out of the flock, at thy valuation [in] silver — shekels by the shekel of the sanctuary — for a guilt-offering.
Read in context
- 13ಇವು ಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು ಮತ್ತು ಉಳಿದದ್ದು ಯಾಜಕನಿಗೋಸ್ಕರ ಆಹಾರಬಲಿಯಾಗಿ ಇರುವದು ಅಂದನು.
- 14ಕರ್ತನು ಮೋಶೆಯೊಂದಿಗೆ ಮಾತನಾಡಿ--
- 15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- 16ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 17ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Leviticus 4:2 ಯಾಜಕಕಾಂಡ 4:2ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
- Ezra 10:19 ಎಜ್ರನು 10:19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- Leviticus 7:1 ಯಾಜಕಕಾಂಡ 7:1ಅದರಂತೆಯೇ ಅತಿಕ್ರಮ ಬಲಿಯ ನಿಯಮವು ಇದೇ: ಇದು ಅತಿ ಪರಿಶುದ್ಧ ವಾದದ್ದು.
- Deuteronomy 15:19–20 ಧರ್ಮೋಪದೇಶಕಾಂಡ 15:19–20ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು. ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು.
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Leviticus 22:1–16 ಯಾಜಕಕಾಂಡ 22:1–16ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು. ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು. ಆರೋನನ ಸಂತತಿಯವರಲ್ಲಿ ಒಬ್ಬನು ಕುಷ್ಠರೋಗಿ ಇಲ್ಲವೆ ಸ್ರಾವವುಳ್ಳವನಿದ್ದರೆ ಅವನು ಶುದ್ಧನಾಗುವ ವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು ಅಶುದ್ಧನಾಗಿ ಮಾಡಲ್ಪಡುವಂತೆ ಹರಿದಾಡುವ ಯಾವದನ್ನಾಗಲಿ ಇಲ್ಲವೆ ಯಾವದೇ ಅಶುದ್ಧತ್ವದಿಂದ ಅಶುದ್ಧ ಮಾಡುವ ಮನುಷ್ಯನನ್ನಾಗಲಿ ಮುಟ್ಟಿದವನು-- ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು. ಸೂರ್ಯನು ಮುಳು ಗಿದಾಗ ಅವನು ಶುದ್ಧನಾಗಿರುವನು, ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ, ಅದು ಅವನಿಗೆ ಆಹಾರ. ತನ್ನನ್ನು ಹೊಲೆಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವದನ್ನಾಗಲಿ ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟದ್ದನ್ನಾಗಲಿ ತಿನ್ನಬಾರದು; ನಾನೇ ಕರ್ತನು. ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ. ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ ಅವನು ಅದರಲ್ಲಿ ತಿನ್ನಬೇಕು, ಅವನ ಮನೆಯಲ್ಲಿ ಹುಟ್ಟಿದವನು ತಿನ್ನಲಿ; ಅವರು ಅವನ ಆಹಾರವನ್ನು ತಿನ್ನಲಿ. ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಬಿಡಲ್ಪಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ; ಆದರೆ ಪರಕೀಯನು ಅದರಲ್ಲಿ ತಿನ್ನಬಾರದು. ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಅರ್ಪಿ ಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. ಇಲ್ಲವೆ ಅವರು ಪರಿಶುದ್ಧವಾದವು ಗಳನ್ನು ತಿನ್ನುವದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Leviticus 27:9–33 ಯಾಜಕಕಾಂಡ 27:9–33ಮನುಷ್ಯನು ಕರ್ತನಿಗೆ ಅರ್ಪಣೆಗಾಗಿ ತರುವವುಗ ಳಲ್ಲಿ ಅದು ಪಶುವಾಗಿದ್ದರೆ ಅವನು ಕೊಡುವಂತವು ಗಳೆಲ್ಲಾ ಕರ್ತನಿಗೆ ಶುದ್ಧವಾಗಿರುವದು. ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು. ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು. ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು. ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು. ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು. ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು. ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು. ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು. ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು. ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು. ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು. ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು. ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು. ಜೂಬಿಲಿ ಸಂವತ್ಸರದಲ್ಲಿ ಆ ಹೊಲದ ಭೂಮಿಯ ಸ್ವಾಸ್ತ್ಯವುಂಟಾದವನಿಗೆ ಅಂದರೆ ಇವನು ಯಾವನಿಂದ ಕೊಂಡುಕೊಂಡನೋ ಅವನಿಗೆ ತಿರುಗಿ ಹಿಂದಕ್ಕೆ ಕೊಡಬೇಕು. ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು. ಪಶುಗಳಲ್ಲಿ ಮೊದಲಾಗಿ ಹುಟ್ಟಿದ್ದು ಮಾತ್ರವೇ ಕರ್ತನ ಚೊಚ್ಚಲಾಗಿರುವದು. ಅದನ್ನು ಯಾವನೂ ಪ್ರತಿಷ್ಠೆಮಾಡಲಾರನು. ಅದು ಎತ್ತಾಗಲಿ ಇಲ್ಲವೆ ಕುರಿ ಯಾಗಲಿ ಅದು ಕರ್ತನದೇ. ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು. ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು. ಭೂಮಿಯ ಬೀಜದಲ್ಲಾಗಲಿ ಮರದ ಫಲದ ಲ್ಲಾಗಲಿ ಹತ್ತನೇ ಪಾಲೆಲ್ಲಾ ಕರ್ತನದೇ. ಅದು ಕರ್ತನಿಗೆ ಪರಿಶುದ್ಧವಾದದ್ದು. ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು. ಇದಲ್ಲದೆ ದನಕುರಿಗಳಲ್ಲಿಯೂ ಕೋಲಿನ ಕೆಳಗೆ ದಾಟುವ ಎಲ್ಲಾದರಲ್ಲಿಯೂ ಹತ್ತರಲ್ಲಿ ಒಂದು ಭಾಗ ಕರ್ತನಿಗೆ ಪರಿಶುದ್ಧವಾಗಿರುವದು. ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- Leviticus 5:16 ಯಾಜಕಕಾಂಡ 5:16ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 5:18 ಯಾಜಕಕಾಂಡ 5:18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Original words (Hebrew)
- soul · H5315נֶפֶשׁ nephesh
- commit · H4603מָעַל mâʻal
- trespass · H4604מַעַל maʻal
- sin · H2398חָטָא châṭâʼ
- ignorance · H7684שְׁגָגָה shᵉgâgâh
- things · H6944קֹדֶשׁ qôdesh
- bring · H935בּוֹא bôwʼ
- trespass · H817אָשָׁם ʼâshâm
- ram · H352אַיִל ʼayil
- blemish · H8549תָּמִים tâmîym
- flocks · H6629צֹאן tsôʼn
- estimation · H6187עֵרֶךְ ʻêrek
- shekels · H8255שֶׁקֶל sheqel
- silver · H3701כֶּסֶף keçeph
- shekel · H8255שֶׁקֶל sheqel
- sanctuary · H6944קֹדֶשׁ qôdesh
- offering · H817אָשָׁם ʼâshâm