Leviticus · chapter 5 · verse 16
Leviticus 5:16 in Kannada
ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
Parishuddha vaadaddallade maadida kedige badalu kottu adakke aidane paalannu koodisi adannu yaajakanige kodabeku, yaajakanu avanigaagi atikramada baliyaada tagarininda praayashchittamaadabeku, aaga adu avanige kshamisalpaduvadu.
Leviticus 5:16 in English
- King James Version (KJV)
- And he shall make amends for the harm that he hath done in the holy thing, and shall add the fifth part thereto, and give it unto the priest: and the priest shall make an atonement for him with the ram of the trespass offering, and it shall be forgiven him.
- World English Bible (WEB)
- He shall make restitution for that which he has done wrong regarding the holy thing, and shall add a fifth part to it, and give it to the priest; and the priest shall make atonement for him with the ram of the trespass offering, and he will be forgiven.
- American Standard Version (ASV)
- and he shall make restitution for that which he hath done amiss in the holy thing, and shall add the fifth part thereto, and give it unto the priest; and the priest shall make atonement for him with the ram of the trespass-offering, and he shall be forgiven.
- Bible in Basic English (BBE)
- And he is to make payment to the priest for what he has done wrong in relation to the holy thing, together with a fifth part of its value in addition; and the priest will take away his sin by the sheep of his offering, and he will have forgiveness.
- Darby Translation (DBY)
- And he shall make restitution for the wrong that he hath done in the holy things, and shall add the fifth part thereto, and shall give it unto the priest; and the priest shall make atonement for him with the ram of the trespass-offering, and it shall be forgiven him.
- Webster's Bible (WBS)
- And he shall make amends for the harm that he hath done in the holy thing, and shall add to it the fifth part, and give it to the priest: and the priest shall make an atonement for him with the ram of the trespass-offering, and it shall be forgiven him.
- Young's Literal Translation (YLT)
- 'And that which he hath sinned against the holy thing he repayeth, and its fifth is adding to it, and hath given it to the priest, and the priest maketh atonement for him with the ram of the guilt-offering, and it hath been forgiven him.
Read in context
- 14ಕರ್ತನು ಮೋಶೆಯೊಂದಿಗೆ ಮಾತನಾಡಿ--
- 15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- 16ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- 17ಯಾವನಾದರೂ ಕರ್ತನು ನಿಷೇಧಿಸಿದ ಆಜ್ಞೆ ಗಳಲ್ಲಿ ಯಾವದನ್ನಾದರೂ ಮಾಡಿ ಪಾಪಮಾಡಿದರೆ ಅದು ಅವನಿಗೆ ತಿಳಿಯದಿದ್ದಾಗ್ಯೂ ಅವನು ಅಪರಾಧಿ ಯಾಗಿರುವನು, ಅವನು ತನ್ನ ಅಪರಾಧವನ್ನು ಹೊತ್ತು ಕೊಳ್ಳುವನು.
- 18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Cross references
- Leviticus 22:14 ಯಾಜಕಕಾಂಡ 22:14ಇದಲ್ಲದೆ ಒಬ್ಬನು ತಪ್ಪಾಗಿ ಪರಿಶುದ್ಧ ವಾದದ್ದನ್ನು ತಿಂದರೆ ಅವನು ಅದರ ಐದನೇ ಪಾಲನ್ನು ಕೂಡಿಸಿ ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡ ಬೇಕು.
- Numbers 5:7 ಅರಣ್ಯಕಾಂಡ 5:7ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
- Leviticus 27:15 ಯಾಜಕಕಾಂಡ 27:15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
- Leviticus 6:4–5 ಯಾಜಕಕಾಂಡ 6:4–5ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು. ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
- Leviticus 27:31 ಯಾಜಕಕಾಂಡ 27:31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
- Leviticus 27:13 ಯಾಜಕಕಾಂಡ 27:13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
- Leviticus 5:10 ಯಾಜಕಕಾಂಡ 5:10ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 27:27 ಯಾಜಕಕಾಂಡ 27:27ಆದರೆ ಅದು ಅಶುದ್ಧ ಪಶುವಾಗಿದ್ದರೆ ನೀನು ಕ್ರಯ ಕಟ್ಟಿದ ಪ್ರಕಾರ ಅದಕ್ಕೆ ಹೆಚ್ಚಾಗಿ ಐದನೇ ಪಾಲನ್ನು ಕೊಟ್ಟು ಅವನು ಅದನ್ನು ವಿಮೋಚಿಸಬೇಕು; ವಿಮೋಚಿಸದಿದ್ದರೆ ಅದನ್ನು ನೀನು ಕ್ರಯ ಕಟ್ಟಿದ ಪ್ರಕಾರ ಮಾರಬೇಕು.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Hebrews 9:13–14 ಇಬ್ರಿಯರಿಗೆ 9:13–14ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Luke 19:8 ಲೂಕನು 19:8ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.
- Exodus 22:1 ವಿಮೋಚನಕಾಂಡ 22:1ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಕೊಯ್ದರೆ ಇಲ್ಲವೆ ಅದನ್ನು ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.
Original words (Hebrew)
- amends · H7999שָׁלַם shâlam
- harm · H2398חָטָא châṭâʼ
- thing · H6944קֹדֶשׁ qôdesh
- add · H3254יָסַף yâçaph
- part · H2549חֲמִישִׁי chămîyshîy
- give · H5414נָתַן nâthan
- priest · H3548כֹּהֵן kôhên
- priest · H3548כֹּהֵן kôhên
- atonement · H3722כָּפַר kâphar
- ram · H352אַיִל ʼayil
- offering · H817אָשָׁם ʼâshâm
- forgiven · H5545סָלַח çâlach